ಶಿವಮೊಗ್ಗ –
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾ ಟದಿಂದ ನಗರವು ಬೂದಿ ಮುಚ್ಚಿದ ಕೆಂಡದಂತಿದ್ದು ಇನ್ನೂ ಈ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇ ಜುಗಳಿಗೆ ಇಂದು ರಜೆ ಘೋಷಿಸಿ ಡಿಸಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

ಇಲ್ಲಿನ ರವಿವರ್ಮ ಬೀದಿ,ಸಿದ್ದಯ್ಯ ರಸ್ತೆಯಲ್ಲಿ ಮೆರವಣಿ ಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು,ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರು.ಮೆರವಣಿಗೆಯಲ್ಲಿ ಸಚಿವ ಕೆ. ಎಸ್ ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಭಾಗವಹಿಸಿ ದ್ದರು.ಹೀಗಾಗಿ ಮುಂಜಾಗ್ರತಾ ದೃಷ್ಟಿಯಿಂದ ಯಾವುದೇ ರೀತಿಯ ಗಲಾಟೆ ಆಗಬಾರದು ಹಾಗೆ ಇದರಿಂದಾಗಿ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ