ಕಾರವಾರ –
ಹತ್ತು ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಕಾರವಾರದಲ್ಲಿ ಮಾತನಾಡಿದ ಅವರು ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್ ಸಿಕ್ಕಿದ್ದು ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸ ಲಾಗುವುದು ಎಂದರು.
ಇನ್ನೂ ಶಿಕ್ಷಕರ ನೇಮಕಾತಿಯ ಎಲ್ಲಾ ಹಂತದ ಸಿದ್ಧತೆ ಪೂರ್ಣಗೊಂಡಿದೆ.ಕೇವಲ 10 ದಿನಗಳಲ್ಲಿ ಶಿಕ್ಷಕರ ನೇಮ ಕಾತಿ ಅಧಿಸೂಚನೆ ಹೊರಡಿಸಲಾಗುವುದು.ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.