ಬೆಂಗಳೂರು –
ಮಹಾಮಾರಿ ಕೋವಿಡ್ ನಿಂದ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೃತರಾದ ಶಿಕ್ಷಕರ ಸಾವಿನ ಪ್ರಕರಣ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.ಹೌದು ರಾಜ್ಯದಲ್ಲಿ ಇತ್ತೀಚಿಗೆ ನಡೆದ ಉಪ ಚುನಾವಣೆಗೆ ನಿಯೋಜನೆಗೊಂಡು ಕೊರೊ ನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೋರಿ ಅರ್ಜಿಯ ನ್ನು ಸಲ್ಲಿಸಲಾಗಿತ್ತು.ಸಾರ್ವಜನಿಕ ಹಿತಾ ಸಕ್ತಿ ಅರ್ಜಿ ಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಚುನಾವ ಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ

ಹೌದು ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದ 55 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ ಯಾಗಿದ್ದರು.ಅನೇಕರ ಆರೋಗ್ಯ ಸ್ಥಿತಿ ಗಂಭೀರ ವಾಗಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಗೊಂಡು ಕೊರೊನಾ ಸೋಂಕಿನಿಂದ ಮೃತಪಟ್ಟ ಶಿಕ್ಷಕರಿಗೆ ನ್ಯಾಯ ಕೊಡಿ ಎಂದು ಬೀದರ್ ಮೂಲದ ಅಂಬರೀಶ್ ಕೆಂಚ ಎಂಬಾತ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ ಸತೀಶ್ ಚಂದ್ರ ಶರ್ಮಾ ಮತ್ತು ನಾಗಪ್ರಸನ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ನೋಟಿ ಸ್ ಜಾರಿ ಮಾಡಿದೆ. ಉಪ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡು ಕೊರೊನಾ ಸೋಂಕಿಗೆ ಬಲಿ ಯಾಗಿ ರುವ ಶಿಕ್ಷಕರಿಗೆ ತಲಾ 1 ಕೋಟಿ ರೂ. ಪರಿ ಹಾರ ಕೋರಿ ಮನವಿ ಮಾಡಲಾಗಿದೆ.

ರಾಜ್ಯದ ರೈತರಿಗೆ, ಬೀದಿ ವ್ಯಾಪಾರಿಗಳಿಗೆ ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರಲಿಲ್ಲ.ಚುನಾವಣೆ ಕರ್ತವ್ಯ ಸಮೀಕ್ಷೆ, ಜನಗ ಣತಿ ಕಾರ್ಯಗಳಿಗೆ ನಿಯೋಜನೆ ಮಾಡುವ ಸರ್ಕಾ ರ ಶಿಕ್ಷಕರಿಗೆ ಕೋವಿಡ್ ಕಾಲದಲ್ಲಿ ಮೋಸ ಮಾಡಿದೆ. ವಿಶೇಷ ಆರ್ಥಿಕ ಪ್ಯಾಕೇಜ್ ಕೊಡದೇ ಅನ್ಯಾಯ ವನ್ನು ಮಾಡಿದ್ದು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟಗಳು ಆಗ್ರಹಿಸಿದ್ದವು. ಇದರ ಬೆನ್ನಲ್ಲೇ ಕರೋನ ಸೋಂಕಿಗೆ ಬಲಿಯಾದ ಶಿಕ್ಷಕರ ವಿಚಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿರುವುದು ಗಮನಾರ್ಹ.