ಬೆಂಗಳೂರು –
ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ
ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು.ಆಂತಕ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿ ನಡೆಸುವುದಾಗಲಿ ಅಲ್ಲಿರುವ ಶೌಚಾಲಯ ಬಳಸುವು ದಾಗಲಿ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕ ರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ಯನ್ನು ನೀಡಿದೆ