ಬೆಂಗಳೂರು –
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಬಿಟ್ಟು ಬಿಡದೇ ಮಳೆಯಾಯ ಸುರಿಯುತ್ತಿದ್ದು ಇನ್ನೂ ಇತ್ತ ಮಕ್ಕಳ ಹಿತದೃಷ್ಟಿಯಿಂದ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜು ಗಳಿಗೆ ಇಂದು ರಜೆ ಘೋಷಿಸಲಾಗಿದೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ ಈ ಒಂದು ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲ್ಲೂಕಿನ ಶಾಲಾ-ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು ಸೋಮವಾರ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಒಂದು ಆದೇಶ ವನ್ನು ಹೊರಡಿಸಲಾಗಿದೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜು ಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಇನ್ನೂ ಇತ್ತ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು ಇಂದು ಕೂಡಾ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಕೊಡಗು ಮತ್ತು ಉತ್ತರ ಕನ್ನಡ……