ಬೆಂಗಳೂರು –
ನಗರ ಪ್ರದೇಶಗಳಲ್ಲಿ ಮಧ್ಯರಾತ್ರಿ 1 ಗಂಟೆಯ ವರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ಬಜೆಟ್ ನಲ್ಲಿ ಘೋಷಣೆ – ಬಜೆಟ್ ನಲ್ಲಿ ವ್ಯಾಪಾರ ವಹಿವಾಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಘೋಷಣೆ ಮಾಡಿದ CM ಹೌದು
ನಗರ ಪ್ರದೇಶಗಲ್ಲಿ ವ್ಯಾಪಾರ ವಹಿವಾಟನ್ನು ಮಾಡಲು ಬೆಳೆಸುವ ಉದ್ದೇಶದಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡೊದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಬಜೆಟ್ ನಲ್ಲಿ ಈ ಒಂದು ವಿಚಾರವನ್ನು ಪ್ರಸ್ತಾಪ ಮಾಡಿದ ಅವರು ಮಧ್ಯ ರಾತ್ರಿ ರಾಜ್ಯದ 11 ನಗರಗಳಲ್ಲಿ ರಾತ್ರಿ 1 ಗಂಟೆ ಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡೊದಾಗಿ ಹೇಳಿದ್ದಾರೆ.
ಬೆಂಗಳೂರು ಸೇರಿದಂತೆ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಾಣಿಜ್ಯ ಮತ್ತು ವ್ಯಾಪಾರದ ಹಿತದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಸಮಯ ವನ್ನು ಹೆಚ್ಚಿಸಲಾಗಿದ್ದು ಬೆಳಗಿನ ಜಾವ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು,ಬಳ್ಳಾರಿ,ಬೆಳಗಾವಿ,ದಾವಣಗೆರೆ, ಹುಬ್ಬಳ್ಳಿಧಾರವಾಡ,ಕಲಬುರಗಿ,ಮಂಗಳೂರು,ಮೈಸೂರು,ಶಿವಮೊಗ್ಗ,ತುಮಕೂರು,ವಿಜಯಪುರ ಮಹಾನಗರಪಾಲಿಕೆಗಳಿದ್ದು ಈ ಎಲ್ಲಾ ಮಹಾ ನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..