ರಾಯಚೂರು –
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ್ದಾರೆ ಎನ್ನುವ ಆರೋಪದಲ್ಲಿ ಇನ್ಸ್ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಆಧರಿಸಿ ರಾಯಚೂರು ತಾಲ್ಲೂಕು ಯರಗೇರಾ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಂಬಾರಾಯ ಎಂ.ಕಮಾನಮನಿ ಅವರನ್ನು ಈಶಾನ್ಯ ವಲಯ ಬಳ್ಳಾರಿ ವಿಭಾಗದ ಐಜಿಪಿ ನಂಜುಂಡಸ್ವಾಮಿ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಹಿಂದೆ ಶಕ್ತಿನಗರ ಠಾಣೆಯಲ್ಲಿ ಅಂಬಾರಾಯ ಅವರು ಕಾರ್ಯನಿರ್ವಹಿಸುತ್ತಿದ್ದರು. ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.