ಬೆಂಗಳೂರು –
ಶಾಲೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಶಾಲೆಗಳಲ್ಲಿ ಗೌರವಾರ್ಥ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಚ ಹಾಳೆ ಅದರಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವ ವಿಚಾರ ಕುರಿತು ಶಿಕ್ಷಣ ಸಚಿವರ ಗಮನಕ್ಕೆ ಬಂದಿದೆ.ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿದ್ದಾರೆ.ನಿಷೇಧವನ್ನು ಮಾಡಿ ಆದೇಶವನ್ನು ಮಾಡಿದ್ದಾರೆ.
ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ನಿಷೇಧ ಮಾಡಿ ಆದೇಶವನ್ನು ಮಾಡಲಾಗಿದೆ.ಈ ಒಂದು ಕುರಿತು ಇಲಾಖೆಯ ಆಯುಕ್ತರು ಆದೇಶವನ್ನು ಮಾಡಿದ್ದಾರೆ
ಇನ್ನೂ ಇದರೊಂದಿಗೆ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ಕಡ್ಡಾಯವಾಗಿ ನಿಷೇಧಿಸುವ ಕುರಿತು ಸುತ್ತೋಲೆ ಹೊರಡಿಸಿ ಕಟ್ಟು ನಿಟ್ಟಾಗಿ ಜಾರಿಗೆ ತರುವಂತೆ ಸೂಚನೆ ನೀಡಿದ್ದಾರೆ.