ಫೆಬ್ರುವರಿ ಎರಡನೇ ವಾರದಲ್ಲಿ ಮಂಡನೆಯಾಗಲಿಗೆ ರಾಜ್ಯ ಸರ್ಕಾರದ ಮಧ್ಯಂತರ ಬಜೆಟ್ – ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಸಿಗುತ್ತಾ ಸಿಹಿ ಸುದ್ದಿ ಘೋಷಣೆ ಮಾಡ್ತಾರಾ ಹಳೆ ಪಿಂಚಣಿ ಯೋಜನೆ

Suddi Sante Desk
ಫೆಬ್ರುವರಿ ಎರಡನೇ ವಾರದಲ್ಲಿ ಮಂಡನೆಯಾಗಲಿಗೆ ರಾಜ್ಯ ಸರ್ಕಾರದ ಮಧ್ಯಂತರ ಬಜೆಟ್ – ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದ ಕೊನೆಯ ಬಜೆಟ್ ನಲ್ಲಿ ಸಿಗುತ್ತಾ ಸಿಹಿ ಸುದ್ದಿ ಘೋಷಣೆ ಮಾಡ್ತಾರಾ ಹಳೆ ಪಿಂಚಣಿ ಯೋಜನೆ

ಬೆಂಗಳೂರು

ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ನ್ನು ಮಂಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದವಾಗ್ತಾ ಇದ್ದಾರೆ.ಹೌದು ಫೆಬ್ರುವರಿ 17 ರಿಂದ ಬಜೆಟ್ ಅಧಿವೇಶನ ನಡೆಯಲಿದ್ದು  ಪೂರ್ವಭಾವಿಯಾಗಿ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.ಡಿಸೆಂಬರ್ ವರೆಗೆ ನಮ್ಮ ರಾಜ್ಯದ ಆದಾಯವು ಮೂರುಪಟ್ಟು ಹೆಚ್ಚಾಗಿದೆ.ಇದನ್ನು ಇನ್ನಷ್ಟು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆ ನೀಡಲಾ ಗಿದ್ದು ಜನಪರ ಆಯವ್ಯಯ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರತೀ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯ ಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆ ಯಡಿ ಮನೆ ನಡೆಸಲು ಕೋವಿಡ್ ಉಪಚಾರ, ಆರೋಗ್ಯ,ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000,1500, 2000,ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ

ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ನೀಡಲಾಗುವುದು.ಸ್ತ್ರೀ ಸಾಮರ್ಥ್ಯ ಯೋಜನೆ ಯನ್ನು ಮೊದಲು ಚಾಲನೆಗೊಳಿಸಿ ಅದನ್ನು ಅನುಷ್ಠಾನ ಗೊಳಿಸಿ ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದೆಂ ದರು.ಇನ್ನೂಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವ ಯೋಜನೆಗಳ ಚಿಂತನೆ ಮಾಡುತ್ತಿ ದ್ದೇವೆ.ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ.

ರೈತರು ಕಾರ್ಮಿಕರು,ಮಹಿಳೆಯರು ಪರಿಶಿಷ್ಟ ಜಾತಿ,ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಯುವಕರಿಗೆ ಸ್ವಾಮಿ ವಿವೇ ಕಾನಂದ ಯುವಶಕ್ತಿ ಯೋಜನೆ,5 ಲಕ್ಷ ಯುವ ಕರಿಗೆ ಸ್ವಯಂ ಉದ್ಯೋಗ ಕ್ಕೆ ಒಂದು ಲಕ್ಷ ನೀಡಿ ಬ್ಯಾಂಕ್ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಎಂಡ್ ಟು ಎಂಡ್ ಅಪ್ರೋಚ್ ವುಳ್ಳ ಕಾರ್ಯಕ್ರಮ ಇದಾಗಿದೆ ಎಂದರು.

ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು.ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗು ವುದು ಯುವಕರಿಗೆ,ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಇದರೊಂದಿಗೆ ಪೌಷ್ಟಿಕ ಆಹಾರ ನೀಡಲು ದೊಡ್ಡ ಪ್ರಮಾಣದ ಘೋಷಣೆ ಮಾಡಲಾಗಿದೆ. ತೀವ್ರ, ಮಧ್ಯಮ ಎಂಬ ವರ್ಗೀಕರಣವಿದ್ದು ತೀವ್ರ ಕೊರತೆಯಿರುವವರಿಗೆ ನೀಡುವ ಆಹಾರವನ್ನೇ ಮಧ್ಯಮ ಕೊರತೆ ಇರುವವರಿಗೆ ನೀಡುವುದು ಈಗಾಗಲೇ ಅನುಷ್ಠಾನಗೊಳ್ಳುತ್ತಿದೆ. 5- 6 ಜಿಲ್ಲೆಗಳಲ್ಲಿ ಐ.ಎಂ.ಆರ್ ಎಂಎಮರ್ ಕಡಿಮೆ ಯಿದ್ದು ಅದನ್ನು ಹೆಚ್ಚಿಗೆ ಮಾಡುವ ಸಲುವಾಗಿ ನಾವು ಚಿಂತನೆ ಮಾಡುತ್ತಿದ್ದೇವೆ ಜನಸಾಮಾನ್ಯರ ಆರೋಗ್ಯ ಶಿಕ್ಷಣ, ಉದ್ಯೋಗ ಆರ್ಥಿಕ ನೆರವು, ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ ಯುವಕ ರಿಗೆ ಮತ್ತು ಸ್ತ್ರೀಯರಿಗೆ ಸಹಾಯ ಮಾಡಲಾಗು ವುದೆಂದರು

ಇನ್ನೂ ಕೊನೆಯ ಈ ಒಂದು ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಎರಡು ವಿಚಾರ ದಲ್ಲಿ ಗುಡ್ ನ್ಯೂಸ್ ಸಿಗುತ್ತದೆಯಾ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಇದ್ದಾರೆ.ಹಳೆ ಪಿಂಚಣಿ ಯೋಜನೆ ಘೋಷಣೆ ಮಾಡಿ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ತಗೆದುಕೊಂಡು ಅದನ್ನು ಘೋಷಣೆ ಮಾಡ್ತಾರೆ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಇದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.