ಬೆಂಗಳೂರು –
ಕಳೆದ ಒಂದು ವಾರದಿಂದ ನಡೆಯುತ್ತಿರುವ ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಬಗೆದಷ್ಟು ಆಳವಾಗುತ್ತಿದೆ.ಪ್ರಕರಣದಲ್ಲಿ ಬಂಧಿತ ಆರೋಪಿ ಸೌಮ್ಯ ಅವರನ್ನು ವಿಚಾರಣೆಗೊಳಪಡಿಸಿದ್ದ ಪೊಲೀಸರು ಇವರು ನೀಡಿದ ಮಾಹಿತಿ ಮೇರೆಗೆ ಧಾರವಾಡ ವಿವಿ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕ ನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅವರಿಗೆ ಪ್ರಶ್ನೆಪತ್ರಿಕೆ ತಯಾರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿತ್ತು.ಇದರಂತೆ ಪ್ರಶ್ನೆ ಪತ್ರಿಕೆ ಸಿದ್ದಪಡಿಸುವಾಗ ಭೂಗೋಳಶಾಸ್ತ್ರದ ಅತಿಥಿ ಉಪನ್ಯಾಸ ಕಿಯಾಗಿದ್ದ ಸೌಮ್ಯ ಅವರಿಗೆ ಪ್ರಶ್ನೆಗಳನ್ನು ಸಿದ್ದಪಡಿಸಲು ನಾಗರಾಜ್ ಹೇಳಿದ್ದರಂತೆ.

ಇದರಂತೆ 17 ಪ್ರಶ್ನೆಗಳನ್ನು ಸಿದ್ದಪಡಿಸಿ ಸೌಮ್ಯ ನೀಡಿದ್ದರು. ಇದರಲ್ಲಿ 12 ಪ್ರಶ್ನೆಗಳನ್ನು ಉಳಿಸಿಕೊಂಡಿದ್ದರು.ಸದ್ಯ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.