ಧಾರವಾಡ –
ಜಿಪಂ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಈಗಾಗಲೇ ಈ ಒಂದು ಪ್ರಕರಣದಲ್ಲಿ ಬಂಧನಕ್ಕೊಳಲಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅತ್ತ ಹಿಂಡಗಲಾ ಜೈಲಿಗೆ ಹೋಗುತ್ತಿದ್ದಂತೆ ಇತ್ತ ಧಾರವಾಡದಲ್ಲಿ ಸಿಬಿಐ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಕಳೆದ ಮೂರು ನಾಲ್ಕು ದಿನಗಳಿಂದ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ, ಬಸವರಾಜ ಮುತ್ತಗಿ,ಸೋಮು ನ್ಯಾಮಗೌಡ ,ಡಿವೈಎಸ್ಪಿ ತುಳಜಪ್ಪ ಸುಲ್ಪಿ ಸೇರಿದಂತೆ ಹಲವರನ್ನು ವಿಚಾರಣೆಯನ್ನು ಸಿಬಿಐ ಅಧಿಕಾರಿಗಳು ಮಾಡುತ್ತಿದ್ದಾರೆ.
ಇನ್ನೂ ಇದರ ನಡುವೆ ಗೋವನಕೊಪ್ಪ ಗ್ರಾಮಕ್ಕೇ ಸಿಬಿಐ ಅಧಿಕಾರಿಗಳು ಆಗಮಿಸಿ ಮಾಹಿತಿಯನ್ನು ಪಡುಕೊಂಡರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳು ಯೋಗಿಶಗೌಡ ಕೊಲೆ ಆರೋಪಿ ಮಹಾಬಳೇಶ ಹೊಂಗಲ್ ಮನೆಗೆ ತೆರಳಿ ಮಾಹಿತಿಯನ್ನು ಪಡೆದುಕೊಂಡರು.
ಧಾರವಾಡ ತಾಲ್ಲೂಕಿನ ಗೋವನಕೊಪ್ಪ ಗ್ರಾಮದಲ್ಲಿರುವ ಮಹಾಬಳೇಶ ಸಧ್ಯ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.ಹೀಗಾಗಿ ಸಿಬಿಐ ಅಧಿಕಾರಿಗಳು ಮಹಾಬಳೇಶ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದರು.
ಇದರೊಂದಿಗೆ ಮಹಾಬಳೇಶನನ್ನು ಕೂಡಾ ವಿಚಾರಣೆಗೊಳಪಡಿಸಿ ಮಾಹಿತಿಯನ್ನು ಪಡೆದುಕೊಂಡರು.ನಂತರ ಇವನನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಸಿಬಿಐ ಅಧಿಕಾರಿಗಳು ಕರೆದುಕೊಂಡು ಬಂದರು ಹಾಗೇ ಇವನೊಂದಿಗೆ ಇನ್ನೊಬ್ಬನನ್ನು ಕೂಡಾ ಕರೆದುಕೊಂಡು ಬಂದಿದ್ದಾರೆ.