ನವದೆಹಲಿ –
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಖರ್ಗೆ ಸೋನಿಯಾಗೆ ಆಹ್ವಾನ – ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ನಿಂದ ಆಮಂತ್ರಣ ಹೌದು ಅಯೋಧ್ಯೆಯಲ್ಲಿ 2024ರ ಜ.22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಬರುವಂತೆ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ ನೀಡಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ.ನಮ್ಮ ನಾಯಕ ರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..