ಬೆಂಗಳೂರು –
ಸರ್ಕಾರಿ ಅಧಿಕಾರಿಗಳ ಪತ್ರಿಕಾಗೋಷ್ಠಿ,ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್ ಸುತ್ತೋಲೆ ಹೊರಡಿಸಿದೆ.
ಹೌದು ಇನ್ನೂ ಮುಂದೆ ರಾಜ್ಯದ ಅಧಿಕಾರಿಯು ನಂಬಿಕಾರ್ಹ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸು ವುದನ್ನು ಹೊರತುಪಡಿಸಿ,ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕಲಾಗಿದೆ.
ಇನ್ನು ಇದರ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳು ಮಹತ್ವದ ಸುತ್ತೋಲೆ ಹೊರಡಿಸಿ ಖಡಕ್ ಆದೇಶ ನೀಡಿದ್ದಾರೆಹಾಗೆ ಸುತ್ತೋಲೆಯಲ್ಲಿ ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇಂತಹ ಪ್ರಸಂಗಗಳು ಸರ್ಕಾರದ ಆಡಳಿತ ವ್ಯವಸ್ಥೆ ಯ ಮೇಲೆ ದುಷ್ಪರಿಣಾಮ ಬೀರುತ್ತವೆ ಹಾಗೂ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡುವಂತ ದ್ದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.