ಬೆಂಗಳೂರು –
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೋನಾ ಮಹಾಮಾರಿಯಿಂದಾಗಿ ರಾಜ್ಯದಲ್ಲಿನ ಶಾಲಾ ಕಾಲೇಜು ಗಳಿಗೆ ರಜೆ ನೀಡುವ ಕುರಿತಂತೆ ಮುಖ್ಯಮಂತ್ರಿ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತಗೆದುಕೊಳ್ಳಲಾಗಿದೆ.ಹೌದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿ ರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.

ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡು ವಂತೆ ಹಾಗೂ ಸೂಕ್ತ ಔಷಧಗಳ ಕಿಟ್ ಒದಗಿಸುವಂತೆ ಸೂಚನೆಯನ್ನು ನೀಡಿದರು. ಹಾಗೇ ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆ ಬಲಪಡಿಸುವಂತೆ ಸೂಚನೆ.ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿ ಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧಾರ ತಗೆದುಕೊಂಡು ಸಂಭಂಧಿಸಿದವರಿಗೆ ಸೂಚನೆ ನೀಡಿದರು.ಹಾಗೇ ರಾಜ್ಯದಲ್ಲಿ ಕರೊನಾ ಪರಿಸ್ಥಿತಿ ನಿಭಾಯಿ ಸುವ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಲಾ ಯಿತು.ಮಾತ್ರವಲ್ಲದೆ ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿ ರುವ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾ ಯಿತು.ಪ್ರಕರಣಗಳ ಸಂಖ್ಯೆ ಮೇರೆಗೆ ಬಿಇಒ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿ ಆಧರಿಸಿ, ಶಾಲೆಗ ಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಈ ಸಭೆಯಲ್ಲಿ ತೀರ್ಮಾನಿಸಲಾಯಿತು.ಈ ಒಂದುಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಬಿ.ಸಿ. ನಾಗೇಶ್,ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು