ಧಾರವಾಡ –
ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಸವ ಜಯಂತಿ ಯನ್ನು ಧಾರವಾಡ ದಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು ಇನ್ನೂ ಜಯಂತಿ ಅಂಗವಾಗಿ ಕಲಾಭವನ ಆವರಣದ ಮಹಾತ್ಮ ಬಸವೇಶ್ವರರ ಮೂರ್ತಿಗೆ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ,ಶಾಸಕ ಅಮೃತ ದೇಸಾಯಿ,ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸೇರಿದಂತೆ ಹಲವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಇದೇ ವೇಳೆ ಉಳವಿ ಶ್ರೀಚನ್ನಬಸವೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಚಾಲನೆ ನೀಡಿದರು.
ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿ ಗಳು,ಶಾಸಕರಾದ ಅಮೃತ ದೇಸಾಯಿ,ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ,ಕ.ವಿ.ವ. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ,ಉಳವಿ ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಎಸ್.ಪಾಟೀಲ, ಮುಖಂಡರಾದ ಗುರುರಾಜ ಹುಣಸಿ ಮರದ,ಶಂಕರ ಕುಂಬಿ ಮತ್ತಿತರರು ಇದ್ದರು.