This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಹೆಡ್ ಕಾನ್ಸ್‌ಟೇಬಲ್ ಗೆ ಜೈಲು ಶಿಕ್ಷೆ ಲಂಚ ಪಡೆದ ಪ್ರಕರಣ ದಲ್ಲಿ ನಾಲ್ಕು ವರ್ಷ ಜೈಲು…..

WhatsApp Group Join Now
Telegram Group Join Now

ಬೆಂಗಳೂರು –

ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಆರೋಪಿಯ ದ್ವಿಚಕ್ರ ವಾಹನ ಬಿಡುಗಡೆಗೆ ₹10,000 ಲಂಚ ಪಡೆದ ಆರೋಪದ ಪ್ರಕರಣದಲ್ಲಿ ನಗರದ ಬಾಗಲ ಗುಂಟೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಎಂ.ಕೆ. ದೋಷಿ ಎಂದು ಸಾರಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, ಅಪರಾಧಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿದೆ.

ಹೌದು 2017ರ ಜುಲೈ ತಿಂಗಳಿನಲ್ಲಿ ಬಾಗಲಗುಂಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು.ಅವರ ಬೈಕ್‌ ಅನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಯಾಗಿದ್ದ ಆ ವ್ಯಕ್ತಿ, ತಮ್ಮ ಬೈಕ್‌ ಮರಳಿಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದರು.ಬೈಕ್‌ ನೀಡಲು ₹ 20,000 ಲಂಚ ಕೊಡುವಂತೆ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಬೇಡಿಕೆ ಇಟ್ಟಿದ್ದರು.ಈ ಕುರಿತು ಬೈಕ್‌ ಮಾಲೀಕ ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.2017ರ ಜುಲೈ 15ರಂದು ದೂರುದಾರರಿಂದ ₹ 10,000 ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್‌ ಬಂಧಿಸಿದ್ದ ಎಸಿಬಿ ಅಧಿಕಾರಿ ಗಳು 2018ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಮೂರು ವರ್ಷಗಳಿಂದಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.ನಿನ್ನೆ ಈ ಒಂದು ಪ್ರಕರ ಣದ ವಿಚಾರಣೆಯನ್ನು ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮಂಜಣ್ಣ ದೋಷಿ ಎಂದು ಆದೇಶ ನೀಡಿದ್ದಾರೆ. ಅಪರಾಧಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.


Google News

 

 

WhatsApp Group Join Now
Telegram Group Join Now
Suddi Sante Desk