ನವದೆಹಲಿ –
ಅಮಿತ್ ಶಾ ರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ – ತೀವ್ರ ಕುತೂಹಲ ಮೂಡಿಸಿದೆ ಭೇಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿಯಾದರು. ನವದೆಹ ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಕೆಲ ವಿಚಾರಗಳ ಕುರಿತಂತೆ ಸಮಾಲೋ ಚಿಸಿದರು.
ಶಾ ಅವರ ಆಹ್ವಾನದ ಮೇರೆಗೆ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ ಎಂದು ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದು ಕೊಂಡಿದ್ದಾರೆ.ಲೋಕಸಭಾ ಹಾಗೂ ರಾಜ್ಯಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿ ನಾಯಕರು ಮನವಿ ಮಾಡಿದ್ದರು.ಆದರೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗಾಲಿ ಮತ ಚಲಾಯಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗಳಿಗೆ ಬೆಂಬಲ ನೀಡುವಂತೆ ಶಾ ಅವರು ಗಾಲಿ ಅವರಿಗೆ ಮನವಿ ಮಾಡಿದ್ದಾರೆ.ಇದಕ್ಕೆ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..