ಬೆಂಗಳೂರು –
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮೋಹನ್ ನಿಧನರಾಗಿದ್ದಾರೆ.ಹೌದು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯನಟ ಮೋಹನ್ ವಿಧಿವಶರಾಗಿದ್ದಾರೆ.ಅಲ್ಪಪಾತ್ರವಾದರೂ ಪ್ರಾಮುಖ್ಯತೆ ಪಾತ್ರಗಳಲ್ಲಿ ಅವರು ಅಭಿನಯಿಸಿ ಕನ್ನಡಿಗರ ಪ್ರೀತಿಗೆ ಪಾತ್ರರಾಗಿದ್ದರು.

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ಹಾಸ್ಯನಟ ಮೋಹನ್ ಅವರನ್ನು ದಾಖಲಿಸಲಾಗಿತ್ತು.ಚಿಕಿತ್ಸೆ ಫಲಸದೇ ಅವರು ವಿಧಿವಶರಾಗಿದ್ದಾರೆ.ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’,’ಕೆಜಿಎಫ್ 2′,’ನವಗ್ರಹ’,’ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.