ಬೆಂಗಳೂರು –
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿಲಾಗಿದೆ ಹೌದು 69 ಸಾಧಕರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸ ಲಾಗುತ್ತಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1 575 ಭೌತಿಕ ಅರ್ಜಿಗಳು ಬಂದಿದ್ದವು.
ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದರುಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾ ಗುತ್ತಿದೆ ರಾಜ್ಯದ ಎಲ್ಲಾ ಜಿಲ್ಲೆಗೂ ಪ್ರಾತಿನಿದ್ಯ ನೀಡ ಲಾಗಿದೆ ಹಾಗೂ ಸಾಮಾಜಿಕ ನ್ಯಾಯ ವನ್ನು ಕಾಪಾಡಿ ಕೊಳ್ಳಲಾಗಿದೆ ಎಂದರು
ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ
ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.ಬಯಲಾಟ ಕ್ಷೇತ್ರ ದಲ್ಲಿ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ.
ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ.ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..