This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನೂ ನೆನಪು ಮಾತ್ರ – ಹಿರಿಯ ಸಾಹಿತಿಯ ನಿಧ‌ನಕ್ಕೆ ರಾಜ್ಯದ ಶಿಕ್ಷಕ ಬಂಧುಗಳು ಸಂತಾಪ…..

<span class=ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನೂ ನೆನಪು ಮಾತ್ರ – ಹಿರಿಯ ಸಾಹಿತಿಯ ನಿಧ‌ನಕ್ಕೆ ರಾಜ್ಯದ ಶಿಕ್ಷಕ ಬಂಧುಗಳು ಸಂತಾಪ….. " title="ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನೂ ನೆನಪು ಮಾತ್ರ – ಹಿರಿಯ ಸಾಹಿತಿಯ ನಿಧ‌ನಕ್ಕೆ ರಾಜ್ಯದ ಶಿಕ್ಷಕ ಬಂಧುಗಳು ಸಂತಾಪ….. " decoding="async" fetchpriority="high" srcset="https://suddisante.com/oatseeng/2024/06/IMG_20240622_124346.jpg?v=1719040890 720w, https://suddisante.com/oatseeng/2024/06/IMG_20240622_124346-257x300.jpg?v=1719040890 257w" sizes="(max-width: 720px) 100vw, 720px" />Oplus_0
WhatsApp Group Join Now
Telegram Group Join Now

ಬೆಂಗಳೂರು

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನ ರಾಗಿದ್ದಾರೆ ಹೌದು ಹೃದಯಾಘಾತದಿಂದ ನಿಧನರಾಗಿದ್ದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ ಕಮಲಾ ಹಂಪನಾ ಅವರು ಕನ್ನಡದ ಲೇಖಕರು ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ.

ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧ ನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.ಕಮಲಾ ಹಂಪನಾ ಅವರು ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ ಸಿ. ರಂಗಧಾಮನಾಯಕ್-ಲಕ್ಷಮ್ಮ ದಂಪತಿಗಳ ಪುತ್ರಿಯಾಗಿ 28-10-1935ರಲ್ಲಿ ಜನಿಸಿದರು.

ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು.ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ 1953ರಲ್ಲಿ SSLC ಮುಗಿಸಿ ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದು ವರೆದು

1955-58ರಲ್ಲಿ ಬಿ.ಎ. ಆನರ್ಸ್ ಮಾಡಿದರು. 1959 ರಲ್ಲಿ ಕನ್ನಡ ಅಧ್ಯಾಪಕಿಯಾಗಿ ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶು ಪಾಲೆ ಆಗಿ ಕಾರ್ಯ ನಿರ್ವಹಿಸಿದರು.

ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರಾಗಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು.

ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು

ಹಿರಿಯ ಮಹಿಳಾ ಸಾಹಿತಿ ಯ ನಿಧ‌ನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಸಾಹಿತ್ಯ ಅಭಿಮಾನಿಗಳು ಸೇರಿದಂತೆ ಹಲವರು ತೀವ್ರ ಸ್ವರೂಪದ ಸಂತಾಪ ವನ್ನು ಸೂಚಿಸಿದ್ಸಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk