ಬೆಂಗಳೂರು –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಡಿಸೆಂಬರ್ 8ರ ಭಾನುವಾರ ಮಹತ್ವದ ಸಭೆ ಯನ್ನು ಕರೆಯಲಾಗಿತ್ತು. ರಾಜ್ಯ ಸರ್ಕಾರಿ ನೌಕರರ ಸಂಘದ ಮುಂದಿನ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಆಯ್ಕೆಗೆ ನಡೆಯುವ ಚುನಾ ವಣೆ ಕುತೂಹಲಕ್ಕೆ ಕಾರಣವಾಗಿದೆ ಈಗಾಗಲೇ ತಾಲೂಕು,ಜಿಲ್ಲಾ ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ರಾಜ್ಯಾಧ್ಯ ಕ್ಷರು ಹಾಗೂ ರಾಜ್ಯ ಖಜಾಂಚಿಗಳ ಆಯ್ಕೆಗೆ ಡಿಸೆಂಬರ್ 27ರಂದು ಮತದಾನ ನಡೆಯ ಲಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಸ್ಥಾನದ ಚುನಾ ವಣೆ ವೇಳಾಪಟ್ಟಿ ಈಗಾಗಲೇ ಘೋಷಣೆಯಾ ಗಿದೆ ಡಿಸೆಂಬರ್ 9ರ ಸೋಮವಾರದಿಂದ ಡಿಸೆಂಬರ್ 18ರ ತನಕ ನಾಮಪತ್ರಗಳನ್ನು ಅಭ್ಯರ್ಥಿಗಳು ಸಲ್ಲಿಕೆ ಮಾಡಲಿದ್ದು.
ಇದರ ನಡುವೆ ಮಹತ್ವದ ನಿರ್ಣಯಗಳನ್ನು ಈ ಒಂದು ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಮುಖರು ತಗೆದುಕೊಂಡಿದ್ದಾರೆ ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮಾಲೋಚನಾ ಸಭೆಯಲ್ಲಿ ಒಮ್ಮತದ ನಿರ್ಧಾರ ವನ್ನು ಡಿಸೆಂಬರ್ 8ರಂದು ಬೆಂಗಳೂರಿನಲ್ಲಿ ನಡೆದ ಈ ಒಂದು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..