ಬೆಂಗಳೂರು –
7ನೇ ವೇತನ ಆಯೋಗದ ಕುರಿತು ಹಾಗೆ ಎನ್ ಪಿಎಸ್ ವಿಚಾರದ ಬಗ್ಗೆ ರಾಜ್ಯ ಸರ್ಕಾರದ ವಿಳಂಬದ ಕುರಿತು ಮುಂದೇನು ಮಾಡಬೇಕು ಬಗ್ಗೆ ಚರ್ಚೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ನೌಕರರ ಸಂಘವು ಇಂದು ಮಹತ್ವದ ಸಭೆಯೊಂದನ್ಮು ಕರೆದಿದೆ.ಇನ್ನೂ ಈ ಒಂದು ಸಭೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿ ಗೊಳಿಸುವಂತೆ ಕರೆ ನೀಡಲಾಗಿದೆ.
ಅತ್ಮೀಯ ಜಿಲ್ಲಾಧ್ಯಕ್ಷರೇ,ಪ್ರಧಾನ ಕಾರ್ಯ ದರ್ಶಿಗಳೇ,ತಾಲ್ಲೂಕು ಅಧ್ಯಕ್ಷರೇ,ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳೇ ಎಲ್ಲಾ ಹಂತದ ಪದಾಧಿಕಾರಿಗಳೇ ದಿನಾಂಕ:21:02:2023 ರಂದು ಮಂಗಳವಾರ ಸಂಜೆ 5:00 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿಯವರು ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಇರುವ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ
ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ 7ನೇ ವೇತನ ಆಯೋಗದ ವರದಿ ಜಾರಿ ಮತ್ತು ಎನ್,ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ತರಲು ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಸಭೆ ಕರೆದಿರುತ್ತಾರೆ.ಈ ಸಭೆಗೆ ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸಭೆ ಯನ್ನು ಯಶಸ್ವಿಗೊಳಿಸಲು ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ (ರಿ)ಧಾರವಾಡ ಕರೆ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..