ಬೆಂಗಳೂರು –
ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಶಿಕ್ಷಕರನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.ಹೀಗಾಗಿ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಕರು ಕೂಡಾ ಭಾಗಿಯಾಗಿದ್ದಾರೆ.ಹಲವಾರು ಸಾರ್ವಜನಿಕ ಸ್ಥಳಗ ಳಲ್ಲಿ ಜೀವವನ್ನು ಲೆಕ್ಕಿಸದೆ ಕರ್ತವ್ಯ ಮಾಡುತ್ತಿರುವ ಶಿಕ್ಷಕರಿಗೆ ಪ್ರಥಮ ಆದ್ಯತೆಯಲ್ಲಿ ವ್ಯಾಕ್ಸಿನ್ ನೀಡಿ ಸ್ಪಷ್ಟ ಆದೇಶ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯವನ್ನು ಮಾಡಿದೆ.
ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಕೂಡಲೇ ಕೋವಿಡ್ ಲಸಿಕೆ ನೀಡಲು ಸ್ಪಷ್ಟವಾದ ಆದೇಶವನ್ನು ಮಾಡಬೇಕು ಹಾಗೆ ಶಿಕ್ಷಕರಿಗೆ ಮತ್ತು ಅವರ ಕುಟುಂ ಬಕ್ಕೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆಯನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕೆಂದು ಸಂಘದ ಅಧ್ಯಕ್ಷ ಶಂಭು ಲಿಂಗನಗೌಡ ಪಾಟೀಲ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಒತ್ತಾಯವನ್ನು ಮಾಡಿದ್ದಾರೆ
ಒಟ್ಟಾರೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸರ್ವ ಸದಸ್ಯರು ಈಗ ರಾಜ್ಯ ಸರ್ಕಾರ ಕ್ಕೆ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದು ಶ್ಲಾಘನೀಯ ಸಂತೋಷದ ಸಂಗತಿ