ಬೆಂಗಳೂರು –
ರಾಜ್ಯದಲ್ಲಿ ಲೋಕಾಯುಕ್ತಕ್ಕೆ ಬಲ ಬರುತ್ತಿದ್ದಂತೆ ಇತ್ತ ಕಾರ್ಯಾಚರಣೆ ಮುಂದುವರೆದಿದ್ದು ಬಿಡುವಿಲ್ಲದೇ ದಾಳಿಗಳು ನಡೆಯುತ್ತಿದ್ದು ದೊಡ್ಡ ದೊಡ್ಡ ಭ್ರಷ್ಟ ತಿಮಿಂಗಳುಗಳೇ ಬಲೆಗೆ ಬೀಳುತ್ತಿದ್ದು ಇನ್ನೂ ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳು ಬಲೆಗೆ ಬಿದ್ದ ಬೆನ್ನಲ್ಲೇ ಈಗ ಮತ್ತೆ ಒರ್ವ ಕೆಎಎಸ್ ಅಧಿಕಾರಿ ಮತ್ತು ಇನ್ನೊರ್ವ ಅಧಿಕಾರಿ ಬಲೆಗೆ ಬಿದ್ದಿದ್ದಾರೆ
ಹೌದು ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಕೆಎಎಸ್ ಅಧಿಕಾರಿ ರಘುನಾಥ್ ಮತ್ತು ಭೂಸ್ವಾಧೀನ ಅಧಿಕಾರಿ ವಿಜಯ್ ಅವರು ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಬೆಂಗಳೂರಿನಲ್ಲಿ ಈ ಒಂದು ಕಾರ್ಯಾಚರಣೆ ದಾಳಿ ಯಾಗಿದ್ದು ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿ ದ್ದಾರೆ.ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಗಳನ್ನು ಸಧ್ಯ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು ಲೋಕಾಯುಕ್ತ ಡಿ.ವೈ.ಎಸ್.ಪಿ. ಪ್ರದೀಪ್ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದ್ದು ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ದಾಳಿ ನಡೆಸಲಾಗಿದ್ದು ಸಧ್ಯ ಕೆಎಎಸ್ ಅಧಿಕಾರಿ ಮತ್ತು ಇನ್ನೊರ್ವ ಅಧಿಕಾರಿಯನ್ನು ವಶಕ್ಕೆ ತಗೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.