ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಪ್ರಧಾನ ಮಾಡಲಾಯಿತು ಕಾಯಕೋಗಿ ಪ್ರಶಸ್ತಿ

Suddi Sante Desk
ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಪ್ರಧಾನ ಮಾಡಲಾಯಿತು ಕಾಯಕೋಗಿ ಪ್ರಶಸ್ತಿ

ಸಿಂಧನೂರು –                           ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ  ಶಿಕ್ಷಕರ  ಸಂಘದ ನಿರ್ದೇಶಕರ ಬಳಗ ಹಾಗೂ ಹಿರಿಯ ಶಿಕ್ಷಕರ ಬಳಗ ಹಾಗೂ NPS ನೌಕರರ ಸಂಘ ತಾಲೂಕು ಘಟಕ ಸಿಂಧನೂರು ಇವರ ಸಂಯುಕ್ತಾಶ್ರ ಯದಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ಯ ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭ ಅದ್ದೂರಿಯಾಗಿ ಅಚ್ಚುಕಟ್ಟಾಗಿ ನೆರವೇರಿತು

 

ಮಾಜಿ ಸಚಿವರು ಹಾಗೂ ಶಾಸಕರಾದ ವೆಂಕಟರಾವ್ ನಾಡಗೌಡ್ರವರು ಸಮಾರಂಭ ಉದ್ಘಾಟಿಸಿದರು ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾ ಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ ಅವರು ಅತ್ಯುತ್ತಮ ಶಿಕ್ಷಕ ಶಿಕ್ಷಕಿಯರಿಗೆ ಕಾಯಕಯೋಗಿ ಪ್ರಶಸ್ತಿ ಪ್ರಧಾನ ನೆರವೇರಿಸಿದರು

 

ರಾಜೇಂದ್ರ ಕುಮಾರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ರಾಯಚೂರು ಜಿಲ್ಲೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾಯಿತ ಪ್ರತಿನಿಧಿಗಳು ಹಾಗೂ ಕರ್ನಾಟಕ ರಾಜ್ಯ ಸರಕಾರಿ NPs ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿ ಗಳು ಉಪಸ್ಥಿತರಿದ್ದು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಯಚೂರು ಜಿಲ್ಲಾ ಅಧ್ಯಕ್ಷ ರಾದ ಶ್ರೀಮತಿ ಛಾಯಾ ಕೊಳುರ ಅವರು ಸಿಂಧನೂರು ತಾಲೂಕಿನ ಅಧ್ಯಕ್ಷ ರಾದ ಶ್ರೀಮತಿ ಸುಮಿತ್ರಾ ಹಿರೇಮಠ ಅವರು ಶ್ರೀಮತಿ ಮಹದೇವಮ್ಮ ಎಲ್ಲ ಪದಾಧಿಕಾರಿಗಳು ಹಾಜರಿದ್ದರು ಇನ್ನೂ ಈ ಒಂದು ಸಮಾರಂಭದ ಎಲ್ಲ ಸಂಘಟಿಕರಿಗೆ ತುಂಬು ಹೃದಯದ ಧನ್ಯವಾದಗಳನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರ ಬಳಗ ಹಾಗೂ ಹಿರಿಯ ಶಿಕ್ಷಕರು. ಕ.ರಾ.ಸ NPS ನೌಕರರ ಸಂಘ ತಾಲೂಕು ಘಟಕ ಸಿಂಧನೂರು ಸಲ್ಲಿಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.