ಬೆಂಗಳೂರು –
ದೀರ್ಘಾವಧಿ ರಜೆ ಪಡೆಯಲು ಸರ್ಕಾರಿ ಅಧಿಕಾರಿಗಳು,ಸಿಬ್ಬಂದಿ ಗಳು ಕಡ್ಡಾಯ ವಾಗಿ ಅನುಮತಿ ಪಡೆದುಕೊಳ್ಳಬೇಕು ಇದು ಅವಶ್ಯಕ ಎಂದು ಚುನಾವಣಾ ಅಧಿಕಾರಿ ಗಳು ತಿಳಿಸಿದ್ದಾರೆ ಹೌದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಹಿನ್ನೆಲೆಯಲ್ಲಿ ಜಿಲ್ಲೆಯ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ದೀರ್ಘಾವಧಿ ರಜೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಮಂಜೂರಾತಿ ಕಡ್ಡಾಯವಾಗಿದೆ.
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಗಳು ತೀವ್ರಗತಿಯಲ್ಲಿ ಜರಗುತ್ತಿರುವ ಕಾರಣ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳ ತಂಡಗ ಳನ್ನು ರಚಿಸಿ ಕಾರ್ಯವೈಖರಿಯನ್ನು ಹಂಚಿಕೆ ಮಾಡಲಾಗಿದೆ.
ನೇಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೂ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕಾಗಿ ರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶಿಸಿದ್ದಾರೆ.
ಈ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆದೇಶಿಸಿರುವ ಅವರು, ಧಾರವಾಡ ಜಿಲ್ಲೆಯಲ್ಲಿನ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿ ಗಳು ಚುನಾವಣೆ ಮುಕ್ತಾಯಗೊಳ್ಳುವವರೆಗೆ
ಹಂಚಿಕೆ ಮಾಡಿರುವ ಕರ್ತವ್ಯಗಳನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು. ಮತ್ತು ಸಂಬಂಧಿಸಿದ ಅಧಿಕಾರಿಗಳು ಜಿಲ್ಲಾ ಚುನಾವ ಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ದೀರ್ಘಾವಧಿ ರಜೆ ಮಂಜೂರು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..