ವಿಜಯಪುರ –
ಪತ್ರಕರ್ತರೊಬ್ಬರ ಮನೆ ಕಳ್ಳತನ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಹುಡ್ಕೋ ದಲ್ಲಿನ ಮನೆಯೊಂದಕ್ಕೇ ಕಳ್ಳರು ಕನ್ನ ಹಾಕಿದ್ದಾರೆ. ಸ್ಥಳೀಯ ಪತ್ರಿಕೆಯೊಂದರಲ್ಲಿ ಪತ್ರಕರ್ತರಾಗಿರುವ ಮಹಾಬಲೇಶ್ವರ ಗಡೇದ ಅವರ ಮನೆಗೆ ಕಳ್ಳರು ಕಳ್ಳತನ ಮಾಡಿದ್ದಾರೆ.

ಮನೆಯಲ್ಲಿದ್ದ 75000 ರೂಪಾಯಿ , ಚಿನ್ನ ಬೆಳ್ಳಿಗಳ ಆಭರಣಗಳನ್ನು ದೋಚಿಕೊಂಡು ಎಸ್ಕೇಫ್ ಆಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಮಹಾಬಲೇಶ್ವರ ಗಡೇದ ತೆರಳಿದ್ದರು.ಮರಳಿ ಇಂದು ಬೆಳಿಗ್ಗೆ ಬಂದು ನೋಡಿದಾಗ ಮನೆ ಕಳ್ಳತನವಾಗಿರುವ ವಿಷಯ ಬೆಳಕಿಗೆ ಬಂದಿದೆ.

ಮನೆಗೆ ಬಂದು ನೋಡಿದಾಗ ವಿಷಯ ತಿಳಿದ ಪತ್ರಕರ್ತ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಮನೆ ಬೀಗ ಇರುವುದನ್ನು ನೋಡಿದ್ದ ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಆನಂದ ವಾಘಮೊರೆ ಮತ್ತು ಪಿಎಸ್ಐ ಮಲ್ಲಪ್ಪ ಮಡ್ಡಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಡ್ತಾ ಇದ್ದಾರೆ.