This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

ಸೆ.9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೊಷವಾಕ್ಯದಡಿ ಕೃಷಿ ಮೇಳ – ಕೃಷಿ ಮೇಳದಲ್ಲಿ ನಾಲ್ಕು ದಿನ ಏನೇನು ಇರಲಿದೆ ಕಂಪ್ಲೀಟ್ ಮಾಹಿತಿ ನೀಡಿದ್ದಾರೆ ಕುಲಪತಿ ಡಾ ಪಿ ಎಲ್ ಪಾಟೀಲ್…..

WhatsApp Group Join Now
Telegram Group Join Now

ಧಾರವಾಡ

ಸೆ.9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೊಷವಾಕ್ಯದಡಿ ಕೃಷಿ ಮೇಳ ಹೌದು ನಗರದ ಕೃಷಿ ವಿಶ್ವವಿದ್ಯಾಲಯವು 2023 ರ ಕೃಷಿ ಮೇಳವನ್ನು ಸೆಪ್ಟೆಂಬರ್ 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ನಿರ್ಧರಿಸ. ಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ತಿಳಿಸಿದರು.

ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಕೃಷಿ ಮೇಳ ವನ್ನು ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11-30 ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿ ಸಲಿದ್ದು ಗೌರವ ಅತಿಥಿಗಳಾಗಿ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ,ಸಭಾಪತಿ ಬಸವರಾಜ ಹೊರಟ್ಟಿ,ಸಂಸದ ಪ್ರಲ್ಹಾದ ಜೋಶಿ, ಕಾರ್ಮಿಕ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾದ ಸಂತೋಷ ಲಾಡ್ ಸೇರಿದಂತೆ ಇನ್ನಿತರ ಸಚಿವರು,ಶಾಸಕರು ಆಗಮಿಸುವರು.ಕೃಷಿ ಸಚಿವ ರಾದ ಚಲುವರಾಯಸ್ವಾಮಿ ಕೃಷಿ ವಿಶ್ವವಿದ್ಯಾನಿಲ ಯದ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದಾರೆ ಅಧ್ಯಕ್ಷತೆಯನ್ನು ಶಾಸಕ ವಿನಯ ಕುಲಕರ್ಣಿ ವಹಿಸಲಿದ್ದಾರೆ ಎಂದರು.

ಈ ಕೃಷಿ ಮೇಳದಲ್ಲಿ ಅಂದಾಜು 15 ಲಕ್ಷಕ್ಕಿಂತಲೂ ಹೆಚ್ಚು ರೈತರು, ರೈತ ಮಹಿಳೆಯರು , ವಿಸ್ತರಣಾ ಹಾಗೂ ಸ್ವಯಂ ಸೇವಾ ಕಾರ್ಯಕರ್ತರು ಭಾಗವ ಹಿಸುವ ನಿರೀಕ್ಷೆಯಿದೆ.ಕೃಷಿಮೇಳ -2023 ರ ಪ್ರಮುಖ ಆಕರ್ಷಣೆಗಳು ಅಂತರಾಷ್ಟ್ರೀಯ ಸಿರಿ ಧಾನ್ಯಗಳ ವರ್ಷ-2023, ಸಾವಯವ ಕೃಷಿ ಬೆಳ ಗಳು,

ಸಿರಿಧಾನ್ಯ ಉತ್ಪಾದನೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ, ಇದರ ಜೊತೆಗೆ ಸಂಶೋಧನೆ ಮಾಡಿದ ವಿವಿಧ ತಳಿಗಳ ಹಾಗೂ ಆಧುನಿಕ ಕೃಷಿ ತಂತದಾನಗಳ ಮಾಹಿತಿ, ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಕಿಸಾನ್ ಡೋನ್ ಬಳಕೆ, ಬರ ನಿರ್ವಹಣಾ ಶಾಂತಿಶತೆ ಗಳು, ಓಣ ಬೇಸಾಯ, ಜಲಾನಯನ ಅಭಿವೃದ್ಧಿ, ಮಣ್ಣು ಆರೋಗ್ಯ, ಜಲಸಾಕ್ಷರತೆ, ಜಲ ಸಂರಕ್ಷಣೆ ತಾಂತ್ರಿಕತೆಗಳು, ಕೃಷಿ ಹಾಗೂ ತೋಟಗಾರಿಕೆ ಹುಟ್ಟುವಳಿಗಳ ರಫ್ತು ಅವಕಾಶಗಳನ್ನು ಬಿಂಬಿ ಸುವ ಪದರ್ಶನಗಳು ಹಾಗೂ ಅನೇಕ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಕೃಷಿ ಮೇಳದ ಅಂಗವಾಗಿ ಫಲ-ಪುಷ್ಪ ಮತ್ತು ತರಕಾರಿ ಬೆಳೆಗಳ ಪ್ರದರ್ಶನ, ಪರಿಸರ ಸಂರಕ್ಷಣೆ, ಕೃಷಿ ಯಂತ್ರೋಪಕರಣಗಳು, ಯಶಸ್ವಿ ರೈತ ರೊಂದಿಗೆ ಸಂವಾದ, ಕೃಷಿ ಸಮಾಲೋಚನೆ, ವಿವಿಧ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ, ಕೃಷಿ, ಅರಣ್ಯ ಜಾನುವಾರುಗಳ ಪ್ರದರ್ಶನ ಹುಟ್ಟುವಳಿಗಳ ಮೌಲ್ಯವರ್ಧನೆಗಾಗಿ ವಿವಿಧ ಪ್ರಾತ್ಯಕ್ಷಿಕೆಗಳ ವೀಕ್ಷಣೆ ಮತ್ತು ಪ್ರದರ್ಶನ, ವಸ್ತ್ರ ವಿನ್ಯಾಸ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ಪನ್ನ ಗಳ ಮಾರಾಟ ಮಾಹಿತಿ ಇತ್ಯಾದಿ ವಿಶಿಷ್ಟ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಘಟಿಸಲಾಗುತ್ತಿದೆ ಎಂದರು.

ಆದಾಯ ದ್ವಿಗುಣಗೊಳಿಸುವ ಎಂಬ ರೈತ ರೊಂದಿಗೆ ಚರ್ಚೆಗೆ ಅವಕಾಶ ಮಾಡಿಕೊಡಲಾ ಗುತ್ತದೆ.ಅಲ್ಲದೇ ವಿಶ್ವವಿದ್ಯಾಲಯದ ವ್ಯಾಪ್ತಿ ಯಲ್ಲಿ ಬರುವ ಪ್ರತಿ ಜಿಲ್ಲೆಯ ವಿಶೇಷ ಸಾಧನೆ ಗೈದ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆಯರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸುತ್ತಿರು ವುದು  ಇದರೊಂದಿಗೆ ವಿವಿಧ ಅಭಿವೃದ್ಧಿ ಇಲಾಖೆ ಗಳು, ಬೀಜ, ಗೊಬ್ಬರ, ಕೀಟನಾಶಕ ಉತ್ಪಾದಿ ಸುವ ಘಟಕಗಳು ಮತ್ತು ಅನೇಕ ಸರಕಾರಿ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು 450 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾಕ್‍ಗಳು ಭಾಗವಹಿಸುವುದರಿಂದ ರೈತರಿಗೆ ಸೂಕ್ತ ಮಾಹಿತಿ ಹಾಗೂ ಕೃಷಿ ಪರಿಕರ ಲಭ್ಯವಾಗಲಿವೆ.

ವ್ಯಾಪ್ತಿಯಲ್ಲಿ ಬರುವ ಎಲ್ಲ ಅಧಿಕಾರಿಗಳಿಗೆ ಕೃಷಿಮೇಳದಲ್ಲಿ ಭಾಗವಹಿಸಲು ಸೂಕ್ತ ನಿರ್ದೆಶನ ನೀಡುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ರೈತ ಮಹಿಳೆಯರು, ಗ್ರಾಮೀಣ ಯುವಕರು ಹಾಗೂ ವಿಸ್ತರಣಾ ಕಾರ್ಯಕರ್ತರು ಸಕೀಯವಾಗಿ ಭಾಗವಹಿಸಲು ಸೂಕ್ತ ವ್ಯವಸ್ಥೆ ಅನುಕೂಲ ಮಾಡಿಕೊಡಬೇಕೆಂದು ಕೋರಿದರು.

ಮಳಿಗೆಗಳನ್ನು ಕಾಯ್ದಿರಿಸಲು (0836-2214468, 8277478507), ಅಧ್ಯಕ್ಷರು, ವಸ್ತು ಪ್ರದರ್ಶನ ಸಮಿತಿ, ಕೃಷಿ ಮೇಳ -2023 ಕೃವಿನಿ, ಧಾರವಾಡ ಇವರನ್ನು ಸಂಪರ್ಕಿಸಲು ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಡಾ.ಎಸ್.ಎಸ್.ಅಂಗಡಿ, ಡಾ.ಬಿ.ಡಿ. ಬಿರಾದಾರ, ಡಾ.ಎಸ್.ಎನ್. ಜಾಧವ ಸೇರಿದಂತೆ ಕೃಷಿ ವಿಜ್ಞಾನಿಗಳು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk