ಬೆಂಗಳೂರು –
ಕಳೆದ ಹಲವು ದಿನಗಳಿಂದ ಬಿಡುವಿಲ್ಲದೆ ಸಮೀಕ್ಷೆ ಕಾರ್ಯದಲ್ಲಿ ತೋಡಗಿಕೊಂಡಿದ್ದ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿದೆ ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು.ಬೆಂಗಳೂರು ಸೇರಿ ದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025 ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇನ್ನೂ ದಸರಾ ರಜೆಯ ನಡುವೆ ಬಿಡುವಿಲ್ಲದೆ ಸಮೀಕ್ಷೆ ಕಾರ್ಯ ಮಾಡಿ ಮತ್ತೆ ದೀಪಾವಳಿ ಯ ನಡುವೆ ರಜೆ ಸಿಗದೆ ಆತಂಕದಲ್ಲಿದ್ದ ಶಿಕ್ಷಕರಿಗೆ ದೊಡ್ಡ ತಲೆನೋವು ಆಗಿತ್ತು ಈ ಒಂದು ವಿಚಾರ ಕುರಿತು ಸುದ್ದಿ ಸಂತೆ ವರದಿ ಮಾಡಿತ್ತು ಸ್ಪಂದಿಸಿದ ರಾಜ್ಯ ಸರ್ಕಾರ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ
ಇನ್ನೂ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ.ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..