ಬೆಂಗಳೂರು –
ಶಿಕ್ಷಣ ಸಚಿವರನ್ನು ಭೇಟಿಯಾದ KSPSTA ಟೀಮ್ – ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ನೇತ್ರತ್ವದಲ್ಲಿ ಭೇಟಿ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಚರ್ಚೆ ಮಾಡಿದ ನಿಯೋಗ
ಶಿಕ್ಷಕರ ಹಲವು ಸಮಸ್ಯೆ ಮತ್ತು ಬೇಡಿಕೆಗಳ ಕುರಿತಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗವು ಶಿಕ್ಷಣ ಸಚಿವರನ್ನು ಭೇಟಿಯಾಗಿದ್ದಾರೆ. ಹೌದು ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ನೇತ್ರತ್ವದಲ್ಲಿನ ನಿಯೋಗವು ಬೆಂಗಳೂರಿನಲ್ಲಿನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಯಾದರು.ಪ್ರಮುಖವಾಗಿ ವೃಂದ ಮತ್ತು ನೇಮಕಾತಿ ನಿಯಮಗಳ ಕುರಿತಂತೆ ಮತ್ತು ಶ್ರಾವಣ ಮಾಸದಲ್ಲಿ ಮಕ್ಕಳು ಬಯಸುವ ಪೂರಕವಾದ ಆಹಾರವನ್ನು ನೀಡಬೇಕು
ಎಲ್ ಬಿ ಎ ಗೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯನ್ನು ಮಾಡಲಾಯಿತು.ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ನೇತ್ರತ್ವದಲ್ಲಿನ ನಿಯೋಗವು ಸಚಿವರನ್ನು ಭೇಟಿಯಾಗಿ ಚರ್ಚೆಯನ್ನು ಮಾಡಿದರು ಸಚಿವರು ಕೂಡಾ ನಿಯೋಗಕ್ಕೆ ಸ್ಪಂದಿಸಿ ಬೇಡಿಕೆಗಳ ಕುರಿತಂತೆ ಶೀಘ್ರದಲ್ಲೇ ಈಡೇರಿಸುವುದಾಗಿ ಭರವಸೆ ಯನ್ನು ನೀಡಿದ್ದಾರೆ.
ಇನ್ನೂ ಈ ಒಂದು ಸಂದರ್ಭದಲ್ಲಿ ರಾಜ್ಯಾಧ್ಯಕ್ಷರೊಂದಿಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಚೇತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..