ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ HDK ಶಾಲೆ ಗಳಿಗೆ ಅನುದಾನ ಕೊಡದಿರೊದು ವಿಷಾದದ ಸಂಗತಿ ಎಂದ ಕುಮಾರಸ್ವಾಮಿ…..

Suddi Sante Desk
ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ HDK ಶಾಲೆ ಗಳಿಗೆ ಅನುದಾನ ಕೊಡದಿರೊದು ವಿಷಾದದ ಸಂಗತಿ ಎಂದ ಕುಮಾರಸ್ವಾಮಿ…..

ಬೆಂಗಳೂರು

ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ HDK ಶಾಲೆ ಗಳಿಗೆ ಅನುದಾನ ಕೊಡದಿರೊದು ವಿಷಾದದ ಸಂಗತಿ ಎಂದ ಕುಮಾರಸ್ವಾಮಿ ಎಸ್
ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ

ತಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನ ವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಕ್ಕಳ ಭವಿಷ್ಯ ರೂಪಿ ಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸ ಬೇಕಿತ್ತು.

‘ಆಚಾರ್ಯದೇವೋ ಭವ’ ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿ ಕೊಳ್ಳಬೇಕಿತ್ತು. ಆದಾಗ್ಯೂ, ಈ ಎರಡೂ ಘಟನೆ ಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರಕಾರ ಹೊಣೆಗಾ ರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.

ಸರಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡು ತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ. ಕೊಡುವ ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡಿಯಾರು?

ಈ ಬಗ್ಗೆ ಸರಕಾರ ಆತ್ಮಾವಲೋಕನ ಮಾಡಿ ಕೊಳ್ಳಲಿ ಎಂದು ಟೀಕಿಸಿದ್ದಾರೆ. ಈ ಎರಡೂ ಪ್ರಕರಣಗಳಲ್ಲಿ ಅಪರಾಧಿ ಸ್ಥಾನದಲ್ಲಿ ನಿಲ್ಲ ಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು. ಆದರೆ, ಶಿಕ್ಷಕರನ್ನಷ್ಟೇ ಬಲಿಪಶುಗಳನ್ನಾಗಿ ಮಾಡುವ ಕೆಲಸ ಆಗುತ್ತಿದೆ.

ಹಾಗೆಯೇ ಬೋಧಕರು, ಶಾಲಾ ಸಿಬ್ಬಂದಿ ಕೂಡ ಇಂಥ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.