ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ – ಉಪ ಮೇಯರ್ ಸಂತೋಷ ಚವ್ಹಾಣ್,ಆಯುಕ್ತ ಡಾ ರುದ್ರೇಶ ಘಾಳಿ ಅವರಿಂದ ಪುಷ್ಪಾರ್ಪಣೆ…..
ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದ ಪಂಡಿತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಆಚರಣೆ ಮಾಡಲಾಯಿತು.ಹುಬ್ಬಳ್ಳಿಯ ಆಯುಕ್ತರ ಕಚೇರಿಯ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪ ಮೇಯರ್ ಸಂತೋಷ ಚವ್ಹಾಣ್ ಆಯುಕ್ತರಾದ ಡಾ ರುದ್ರೇಶ ಘಾಳಿಯವರು ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು
ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮಿಸಿದ ಅವರು ಇದರೊಂದಿಗೆ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.ಈ ಸಂಧರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಇಮ್ರಾನ್ ಎಲಿಗಾರ, ಆರೋಗ್ಯ ಸ್ಥಾಯಿ ಸಮೀತಿಯ ಸದಸ್ಯರಾದ ರಾಜಣ್ಣ ಕೊರವಿ, ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ ಪಾಲಿಕೆಯ ಸದಸ್ಯರು, ಪಾಲಿಕೆಯ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……