ಶಾಲೆಗಳಿಗೆ ರಜೆ ಶಿಕ್ಷಕರಿಗಿಲ್ಲ ರಜೆ DDPI ಆದೇಶ ದಿನನಿತ್ಯ ಶಾಲೆ ಗಳಿಗೆ ತೆರಳಿ ಆನ್ ಲೈನ್ ಪಾಠ ಮಾಡಲು ಸೂಚನೆ…..

Suddi Sante Desk

ಧಾರವಾಡ –

ಧಾರವಾಡ ಗ್ರಾಮೀಣ,ಧಾರವಾಡ ನಗರ ಮತ್ತು ಹುಬ್ಬಳ್ಳಿ ನಗರ,ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಶಾಲೆಗಳಲ್ಲಿ 1 ರಿಂದ 8 ನೇ ತರಗತಿವರೆಗೆ ಭೌತಿಕ ಕ್ಲಾಸ್‍ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಇಂದು ಆದೇಶಿಸಿದ್ದಾರೆ. ಆದರೆ ಈ ಎಲ್ಲ ತಾಲೂಕುಗಳ ಶಿಕ್ಷಕರು ದಿನನಿತ್ಯದಂತೆ ಶಾಲೆಗೆ ತೆರಳಿ ಆನ್‍ಲೈನ್ ಮೂಲಕ ಮಕ್ಕಳಿಗೆ ಪಠ್ಯ ಬೋಧನೆ ಮಾಡಬೇಕು.ಮತ್ತು 9 ಹಾಗೂ 10 ನೇ ವರ್ಗದ ತರಗತಿಗಳನ್ನು ಕೋವಿಡ್ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ದಿನನಿತ್ಯದಂತೆ ಭೌತಿಕ ಕ್ಲಾಸ್‍ಗಳನ್ನು ನಡೆಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಧಾರವಾಡ ಜಿಲ್ಲೆಯಲ್ಲಿ ಇವತ್ತಿನವರೆಗೆ ಒಟ್ಟು 50 ಮಕ್ಕಳಲ್ಲಿ ಹಾಗೂ 3 ಶಿಕ್ಷಕರಲ್ಲಿ ಕೋವಿಡ್ ಸೋಂಕು ಪತ್ತೆಯಾ ಗಿದೆ.ಧಾರವಾಡ ಗ್ರಾಮೀಣ ವಲಯದಲ್ಲಿ 9 ಬಾಲಕ ರಿಗೆ ಹಾಗೂ 3 ಬಾಲಕಿಯರಿಗೆ ಒಟ್ಟು 12 ಜನರಿಗೆ ಮತ್ತು ಧಾರವಾಡ ನಗರ ವಲಯದಲ್ಲಿ ಓರ್ವ ಬಾಲಕಿ ಗೆ ಹಾಗೂ ಹುಬ್ಬಳ್ಳಿ ನಗರ ವಲಯದಲ್ಲಿ 19 ಬಾಲಕ ರಿಗೆ 14 ಬಾಲಕಿಯರು ಸೇರಿ 33 ಜನರಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ.ಧಾರವಾಡ ಗ್ರಾಮೀಣ,ಧಾರವಾಡ ನಗರ ಮತ್ತು ಹುಬ್ಬಳ್ಳಿ ನಗರ ವಲಯ ಸೇರಿ ಒಟ್ಟು 50 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.ಮತ್ತು ಓರ್ವ ಪುರುಷ ಹಾಗೂ ಇಬ್ಬರು ಮಹಿಳಾ ಶಿಕ್ಷಕಿಯರಲ್ಲಿಯೂ ಸಹ ಕೋವಿಡ್ ಸೋಂಕು ಪತ್ತೆಯಾಗಿದೆ.ಸೋಂಕು ಕಂಡು ಬಂದ ಶಾಲೆಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಿ ಸ್ವಚ್ಛಗೊಳಿಸಲಾಗಿದೆ.ಸೋಂಕಿತ ಮಕ್ಕಳು ಹಾಗೂ ಶಿಕ್ಷಕರು ಆರೋಗ್ಯವಾಗಿದ್ದು ಹೋಂ ಕ್ವಾಂರಟೈನ್ ಆಗಿ ಚಿಕಿತ್ಸೆ ಪಡೆದಿದ್ದಾರೆ. ಅಳ್ನಾವರ, ಹುಬ್ಬಳ್ಳಿ ಗ್ರಾಮೀಣ, ಕುಂದಗೋಳ, ನವಲಗುಂದ ಅಣ್ಣಿಗೇರಿ ತಾಲೂಕುಗಳ ಶಾಲೆಗಳಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿಯವರೆಗೆ ಕಂಡು ಬಂದಿಲ್ಲ. ಮತ್ತು ಶಾಲಾ ಮುಖ್ಯಸ್ಥರಿಗೆ ಮಕ್ಕಳ ಆರೋಗ್ಯ ಸುರಕ್ಷತೆ ಕುರಿತು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ.ಶಾಲೆಗೆ ಬರುವ ಪ್ರತಿ ಮಗು ತಪ್ಪದೇ ಮಾಸ್ಕ್ ಧರಿಸಿ ಒಳಬರುವಂತೆ ಮತ್ತು ಪರಸ್ಪರ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿದೆ. ಒಂದೇ ವರ್ಗದಲ್ಲಿ 100 ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ಬ್ಯಾಚ್ ಮೂಲಕ ವರ್ಗಗಳನ್ನು ನಡೆಸುವಂತೆ ತಿಳಿಸ ಲಾಗಿದೆ.ಒಟ್ಟಾರೆಯಾಗಿ ಮಕ್ಕಳ ಹಾಗೂ ಶಿಕ್ಷಕರ ಆರೋಗ್ಯ ಸುರಕ್ಷತೆಗೆ ಆಧ್ಯತೆ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಎಲ್ಲಾ ಶಾಲೆಯ ಪ್ರಧಾನ ಗುರುಗಳಿಗೆ ಮತ್ತು ಮುಖ್ಯೋಪಾಧ್ಯಾಯರಿಗೆ ಸಾರ್ವಜನಿಕ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.