ಬೆಂಗಳೂರು –
ರಾಜ್ಯದಲ್ಲಿ ಗುಡುಗು ಸಿಡಿಲಿ ನೊಂದಿಗೆ ದ ಮಳೆಗೆ ಹಲವು ಅವಾಂತರಗಳು ಅನಾಹುತಗಳು ನಡೆದಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ.
ರಾಯಚೂರು ಜಿಲ್ಲೆ ಮಸ್ಕಿ ತಾಲೂಕು ಮೇದಿನಾ ಪೂರ ಗ್ರಾಮದ ಈರಪ್ಪ, ಚಿಕ್ಕಬಳ್ಳಾಪುರ ಜಿಲ್ಲೆಯ ಕುಂದಲಗುರ್ಕಿ ಗ್ರಾಮದ ನಾಗಮ್ಮ, ವಿಜಯನಗರ ಜಿಲ್ಲೆಯ ಕುದುರೆಡವು ಗ್ರಾಮದ ನಿಂಗರಾಜ ಮತ್ತು ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದ ಬಸವರಾಜ ಅವರು ಸಿಡಿಲಿನಿಂದ ಮೃತಪಟ್ಟಿದ್ದಾರೆ. ಶಿಡ್ಲಘಟ್ಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು ಇನ್ನೂ ನಾಲ್ಕು ದಿನ ಹಲವುಕಡೆ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಮೇಲ್ಮೈ ನಲ್ಲಿ ಸುಳಿಗಾಳಿ ತೀವ್ರಗೊಂಡ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 15 ರಿಂದ ಎರಡು ದಿನ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಏಪ್ರಿಲ್ 15 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಏಪ್ರಿ ಲ್ 17, 18 ರಂದು ರಾಜ್ಯದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ