ಬೆಂಗಳೂರು –
ಮಾಜಿ ಶಾಸಕರ ಬಳಿ ಜೀವಂತ ಗುಂಡುಗಳು ಪತ್ತೆಯಾದ ಘಟನೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಹೌದು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದ ಬಿಜೆಪಿಯ ಮುಖಂಡ, ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್ (60) ಅವರ ಬಳಿ ಜೀವಂತ ಗುಂಡುಗಳು ಪತ್ತೆಯಾಗಿವೆ.
ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ನಂತರ ವಿಚಾರಣೆ ಮಾಡಿದ ಪೊಲೀಸರು ಮಾಹಿತಿಯನ್ನು ಪಡೆದುಕೊಂಡು ವಿಚಾರಣೆ ಮಾಡಿ ಬಿಟ್ಟು ಕಳುಹಿಸಿದ್ದಾರೆ.ಡಿಸೆಂಬರ್ 16ರಂದು ಹೈದರಾಬಾದ್‌ಗೆ ಹೋಗಲು ಮಧ್ಯಾಹ್ನ 1 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅವರ ಬ್ಯಾಗನ್ನು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಬ್ಯಾಗ್‌ನಲ್ಲಿ 14 ಗುಂಡುಗಳು ಪತ್ತೆಯಾಗಿದ್ದವು ಎಂದು ವಿಮಾನ ನಿಲ್ದಾಣದ ಪೊಲೀಸ್ ಮೂಲಗಳು ಹೇಳಿವೆ.ನಂತರ ಮಾನಪ್ಪ ಅವರನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ, ಗಸ್ತು ವಾಹನದ ಪೊಲೀಸರಿಗೆ ಒಪ್ಪಿಸಿದ್ದರು.
ಮಾನಪ್ಪ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು. ಪಿಸ್ತೂಲ್ ಹಾಗೂ ಜೀವಂತ ಗುಂಡು ಇಟ್ಟುಕೊಳ್ಳಲು ಮಾನಪ್ಪ ಅವರು ಪರವಾನಗಿ ಪಡೆದಿರುವುದು ಗೊತ್ತಾಯಿತು. ನಂತರ, ಅವರ ಹೇಳಿಕೆ ಪಡೆದು ಬಿಟ್ಟು ಕಳುಹಿಸಲಾಯಿತು’ ಎಂದೂ ಮೂಲಗಳು ತಿಳಿಸಿವೆ.ಮಾನಪ್ಪ ಅವರು ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.