This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಒಂದೇ ವರ್ಷದಲ್ಲಿ 21 ಸರ್ಕಾರಿ ಶಾಲೆಗಳಿಗೆ ಬೀಗ – ಹೆಚ್ಚಾಗುತ್ತಿದೆ ಆಂಗ್ಲ ಮಾಧ್ಯಮ ಶಾಲೆಗಳ ಪ್ರೀತಿ ಸರ್ಕಾರಿ ಶಾಲೆಗಳಿಗೆ ಬೀಳುತ್ತಿದೆ ಬೀಗ…..

WhatsApp Group Join Now
Telegram Group Join Now

ಬೆಂಗಳೂರು

ಒಂದೇ ವರ್ಷದಲ್ಲಿ 21 ಸರ್ಕಾರಿ ಶಾಲೆಗಳಿಗೆ ಬೀಗ – ಹೆಚ್ಚಾಗುತ್ತಿದೆ ಆಂಗ್ಲ ಮಾಧ್ಯಮ ಶಾಲೆಗಳ ಪ್ರೀತಿ ಸರ್ಕಾರಿ ಶಾಲೆಗಳಿಗೆ ಬೀಳುತ್ತಿದೆ ಬೀಗ ಹೌದು ಬದಲಾದ ಶಿಕ್ಷಣ ವ್ಯವಸ್ಥೆಯ ನಡುವೆ ಅದರಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ವ್ಯವಸ್ಥೆಯ ನಡುವೆ ಸರ್ಕಾರಿ ಶಾಲೆಗಳನ್ನು ಮಾತನಾಡಿಸುವವರೇ ಇಲ್ಲದಂತಾಗಿದ್ದು

ಹೀಗಾಗಿ ಚಿಕ್ಕಮಗಳೂರಲ್ಲಿ ಒಂದೇ ವರ್ಷದಲ್ಲಿ 21 ಸರ್ಕಾರಿ ಶಾಲೆಗಳಿಗೆ ಬೀಗವನ್ನು ಹಾಕಲಾಗಿದೆ ಹೌದು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಎಷ್ಟೇ ಯೋಜನೆಗಳನ್ನು ಜಾರಿಗೆ ತಂದರೂ ಕೂಡಾ ಸರ್ಕಾರಿ ಶಾಲೆಗಳು ಬಾಗಿಲು ಹಾಕುತ್ತಿವೆ.ಹೀಗಾಗಿ ಜಿಲ್ಲೆಯಲ್ಲಿ ಒಂದೇ ವರ್ಷ ದಲ್ಲಿ 21 ಸರ್ಕಾರಿ ಶಾಲೆಗಳಿಗೆ ಬೀಗವನ್ನು ಹಾಕ ಲಾಗಿದೆ.ಪೋಷಕರ ಆಂಗ್ಲ ಮಾಧ್ಯಮದ ಮೇಲಿನ ವ್ಯಾಮೋಹವೋ, ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನೀಡಲು ಸಾಧ್ಯವಾಗುತ್ತಿ ಲ್ಲವೋ ಅಥವಾ ಸರ್ಕಾರ ಕೇಳಿದವರಿಗೆಲ್ಲ ಖಾಸಗಿ ಶಾಲೆಗಳಿಗೆ ಅನುಮತಿ ನೀಡುತ್ತಿರುವ ಕಾರಣವೋ ಗೊತ್ತಿಲ್ಲ.

ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಮಾತ್ರ ಬೀಗ ಬೀಳ್ತಾನೆ ಇದೆ. ಮಕ್ಕಳಿಗೆ ಬಿಸಿ ಯೂಟ, ಹಾಲು, ಮೊಟ್ಟೆ, ಸೈಕಲ್ ಅಂತೆಲ್ಲಾ ವಿವಿಧ ಯೋಜನೆಗಳನ್ನು ಜಾರಿಗೆ ತಂದರೂ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಲಾಗುತ್ತಿಲ್ಲ. 2023ರ ಒಂದೇ ವರ್ಷ 21 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ.21 ಕನ್ನಡ ಶಾಲೆಗಳು ಬಂದ್ ಆಗಿವೆ.

ಸರ್ಕಾರ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆ ಗಳನ್ನು ಜಾರಿಗೆ ತಂದರು ಸಹ, ಹೆತ್ತವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮೂಗು ಮುರಿಯುತ್ತಿದ್ದಾರೆ.ಹೀಗಾಗಿ ಜಿಲ್ಲೆಯಲ್ಲಿ ವರ್ಷ ದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿರುವ ಪ್ರಮಾಣ ಕೂಡಾ ಹೆಚ್ಚಿದೆ.

ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಆಂಗ್ಲ ಮಾಧ್ಯಮದಲ್ಲಿ ಮಕ್ಕಳು ಓದುತ್ತಿದ್ದಾರೆ ಸರ್ಕಾರ ಸರ್ಕಾರಿ ಶಾಲೆಗಳನ್ನು ಉಳಿಸೋಕೆ ನಾನಾ ಯೋಜನೆಗಳನ್ನು ಜಾರಿಗೆ ತಂದು ಪ್ರಯತ್ನ ಪಟ್ಟರೂ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿಲ್ಲ.

ಹೀಗಾಗಿ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಏಳೆಂಟು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ. ನೂರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಸರ್ಕಾರಿ ಶಾಲೆಗಳಿಂದು ಪಾಳುಬಿದ್ದ ಕಟ್ಟಡಗಳಂತಾಗಿವೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk