ನವದೆಹಲಿ –
ಹೌದು ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ – ಮತದಾನ ಮೂಲಕ ಅಂಗೀಕಾರ ಗೊಂಡ ಐತಿಹಾಸಿಕ ಮಸೂದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕ ಸಭೆಯಲ್ಲಿ ಅಂಗೀಕರಿಸಲಾಯಿತು.
ಮತದಾನ ಮೂಲಕ ಐತಿಹಾಸಿಕ ಮಸೂದೆ ಅಂಗೀಕಾರಗೊಂಡಿದೆ.ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತದಾನ ಮಾಡಿದ್ದು, ವಿಧೇಯಕದ ವಿರುದ್ಧ ಇಬ್ಬರು ಸಂಸ ದರು ಮತ ಚಲಾಯಿಸಿದ್ದಾರೆ.ಲೋಕಸಭೆ ಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಮತದಾನ ಮಾಡುವಂತೆ ಸಂಸದರಲ್ಲಿ ಮನವಿ ಮಾಡಿದ್ದಾರೆ.
ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..