ರಾಜ್ಯದಲ್ಲಿ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ ಬಲೆಗೆ ಬಿದ್ದ ಅಧಿಕಾರಿಗಳು ಯಾರು ಯಾರು ಗೊತ್ತಾ…..

Suddi Sante Desk
ರಾಜ್ಯದಲ್ಲಿ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ ಬಲೆಗೆ ಬಿದ್ದ ಅಧಿಕಾರಿಗಳು ಯಾರು ಯಾರು ಗೊತ್ತಾ…..

ಬೆಂಗಳೂರು

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 8 ಜನ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಕೋಲಾರ, ದಾವಣಗೆರೆ, ತುಮಕೂರು, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿದೆ.

ಬೆಂಗಳೂರಿನಲ್ಲಿ ಡಿಪಿಎಆರ್ ಮುಖ್ಯ ಎಂಜಿನಿಯರ್ ಟಿ.ಡಿ. ನಂಜುಂಡಪ್ಪ, ಬಿಬಿಎಂಪಿಯ ಗುಣಮಟ್ಟ ನಿಯಂತ್ರಣ ಮತ್ತು ಗುಣಮಟ್ಟ ಭರವಸೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹೆಚ್.ಬಿ. ಕಲ್ಲೇಶಪ್ಪ ಅವರ ಮನೆಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾ ಹಕ ಎಂಜಿನಿಯರ್ ಜಿ. ನಾಗರಾಜ್, ಕಲಬುರಗಿಯಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಘಟಕದ ಅಧಿಕಾರಿ ಜಗನ್ನಾಥ್ ಅವರ ಮನೆಗಳ ಮೇಲೂ ದಾಳಿ ನಡೆದಿದೆ.

ದಾವಣಗೆರೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿರಾ ತಾಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಗದೀಶ್ ಅವರ ಮನೆ ಮೇಲೆ ಈ ದಾಳಿ ನಡೆದಿದೆ ಡಾ. ಜಗದೀಶ್ ಅವರು ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಈ ದಾಳಿ ನಡೆದಿದೆ.

ತುಮಕೂರಿನ ಬಟವಾಡಿ ಬಳಿಯಿರುವ ಮನೆ, ಮಂಜುನಾಥ ನಗರದಲ್ಲಿರುವ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿಯಲ್ಲಿರುವ ಮನೆ ಮತ್ತು ಶಿರಾ ತಾಲೂಕಿನ ಬರಗೂರಿನಲ್ಲಿರುವ ಆಸ್ತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟಾರೆಯಾಗಿ ಬರಗೂರಿನಲ್ಲಿ 3 ಕಡೆ, ತುಮಕೂರಿ ನಲ್ಲಿ 3 ಕಡೆ ಸೇರಿ ಒಟ್ಟು 6 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಡಾ. ಜಗದೀಶ್ ಅವರ ಪತ್ನಿ ರೂಪ, ತಾಯಿ ಮತ್ತು ಸಹೋದರ ಕಾಂತರಾಜ್ ಹೆಸರಿನಲ್ಲಿರುವ ಆಸ್ತಿಗಳ ದಾಖಲೆಗಳನ್ನು ಪರಿಶೀಲಿ ಸಲಾಗುತ್ತಿದೆ.

ವಿಜಯಪುರದಲ್ಲಿ ಕರ್ನಾಟಕ ಗೃಹ ಮಂಡಳಿ ಎಫ್‌ಡಿಎ ಶಿವಾನಂದ ಕೆಂಬಾವಿ ಅವರ ಮನೆ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ವಿಜಯಪುರ ನಗರದ ಸುಕೂನ್ ಕಾಲೋನಿ ಯಲ್ಲಿರುವ ನಿವಾಸ ಮತ್ತು ವಿಜಯಪುರ ಜಿಲ್ಲೆ ತಿಡಗುಂದಿ ಗ್ರಾಮದ ಬಳಿಯಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾ ಗುತ್ತಿದೆ.

ಲೋಕಾಯುಕ್ತ ಎಸ್ಪಿ ಡಿ. ಮಲ್ಲೇಶ್ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನ ವರ್ ಸೇರಿದಂತೆ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿ ಗಳು ಇಂದು ಬೆಳಗ್ಗೆ ಭ್ರಷ್ಟಾಚಾರ ಆರೋಪ ಎದುರಿ ಸುತ್ತಿರುವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದ್ದಾರೆ.

ಪಿಡಬ್ಲ್ಯೂಡಿ ಇಲಾಖೆಯ ಸೆಕ್ರೆಟರಿ ಇನ್ ಚೀಫ್ ಜಗನ್ನಾಥ್ ಹಲಿಂಗೆ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಕಲಬುರಗಿ ನಗರದ ಓಕಳಿ ಕ್ಯಾಂಪ್ ಬಡಾವಣೆಯಲ್ಲಿರುವ ಮನೆ, ಬೆಂಗಳೂರಿನ ಕಚೇರಿ, ಧನ್ನೂರ್ (ಕೆ) ಗ್ರಾಮದಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾ ಗಿದೆ.

ಲೋಕಾಯುಕ್ತ ಅಧಿಕಾರಿಗಳ 8 ತಂಡಗಳು ಈ ದಾಳೆಯಲ್ಲಿ ಪಾಲ್ಗೊಂಡಿದ್ದವು. ಎಸ್ಪಿ ಬಿಕೆ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಈ ದಾಳಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀಳಗಿ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆಂಟ್ ಮಲ್ಲೇಶ್ ದುರ್ಗದ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಬಾಗಲ ಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ, ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿಯಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.