ಹಾಸನ –
ರಾಜ್ಯಾದ್ಯಂತ ಲೋಕಾಯುಕ್ತ ದಾಳಿಯಾಗಿದ್ದು ಇತ್ತ ಹಾಸನದಕೆ ಪಿಟಿಸಿಎಲ್ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.ಅಕ್ರಮ ವಾಗಿ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಲೋಕಾ ಯುಕ್ತ ಅಧಿಕಾರಿ ಗಳು ಈ ಒಂದು ದಾಳಿಯನ್ನು ಮಾಡಿದ್ದಾರೆ.
ಹಾಸನದ ಕೆಪಿಟಿಸಿಎಲ್ ಜೂನಿಯರ್ ಇಂಜಿನಿ ಯರ್ ನಾರಾಯಣ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಹಾಸನ ಹೊರವಲ ಯದ ಬೊಮ್ಮನಾಯಕನಹಳ್ಳಿರುವನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತರು ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ.
ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದು ಕೊಂಡು ಮುಂದಿನ ಹಂತದ ತನಿಖೆ ಯನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹಾಸನ…..