ಬೆಂಗಳೂರು –
ಹೌದು ಫೆಬ್ರುವರಿ 20 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಸಮಾವೇಶ ದಲ್ಲಿ ಲೋಕಾಯುಕ್ತರು ಭಾಗಿಯಾಗಲಿದ್ದಾರೆ ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ ‘ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ‘ಆಡಳಿತ ದಲ್ಲಿ ದಕ್ಷತೆ-ಪಾರದರ್ಶಕತೆ-ಪ್ರಾಮಾಣಿಕತೆ’ ವಿಷಯ ಕುರಿತು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಉಪನ್ಯಾಸ ನೀಡಲಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ’ ವಿಷಯದ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪನ್ಯಾಸ ನೀಡಲಿದ್ದಾರೆ.ಮಾಹಿತಿ ಹಕ್ಕು ಅಧಿನಿಯಮ (2005) ಸವಾಲುಗಳು-ಪರಿಹಾರ ಗಳು’ ವಿಷಯವಾಗಿ ರಾಜ್ಯ ಮಾಹಿತಿ ಆಯೋಗ, ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಧಾಕಪ್ಪ ಉಪನ್ಯಾಸ ನೀಡಲಿದ್ದಾರೆ.
ಈ ಬೃಹತ್ ಸಮಾವೇಶದಲ್ಲಿ ಸರ್ಕಾರಿ ನೌಕರರ ನೆಮ್ಮದಿಯ ಬದುಕಿಗಾಗಿ ನಮ್ಮ ಬೇಡಿಕೆಗಳು ಈಡೇರ ಬೇಕು ಎಂದು ಸರ್ಕಾರದ ಮುಂದೆ ನೌಕರರ ಸಂಘ ಹಲವು ಬೇಡಿಕೆಗಳನ್ನು ಇಡಲಿದೆ. ಇವುಗಳಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವುದು ಪ್ರಮುಖವಾಗಿವೆ. ಸಮಾವೇಶದಲ್ಲಿ ಸರ್ಕಾರ ನೌಕರರಿಗೆ ಯಾವ ಭರವಸೆ ನೀಡಲಿದೆ? ಎಂದು ಕಾದು ನೋಡಬೇಕಿದೆ.
2024ರ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಮುಗಿದು ಹೊಸ ಪದಾಧಿಕಾರಿಗಳ ಆಯ್ಕೆಯಾಗಿದೆ. ಈ ಚುನಾವಣೆ ಬಳಿಕ ಬೃಹತ್ ಸಮಾವೇಶವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಪಾಲ್ಗೊಳ್ಳಲು ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವಂತೆ ವಿವಿಧ ಜಿಲ್ಲೆಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಓಡಿಡಿ ಸೌಲಭ್ಯವನ್ನು ಸಹ ನೀಡಲಾಗುತ್ತದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..