ಧಾರವಾಡ –
ಹೊಸ ಕನಸು ಹೊಸ ಬದಲಾವಣೆ ಬಯಸಿ ಧಾರವಾಡದ ವಾರ್ಡ್ 13 ರಲ್ಲಿ JDS ಪಕ್ಷದಿಂದ ಮತ್ತೊಂದು ಬಾರಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪರ್ಧೆ ಮಾಡಿರುವ ರಾಜು ಅಂಬೊರೆ ಪರ ಸಾಕಷ್ಟು ಪ್ರಮಾಣದಲ್ಲಿ ಗೆಲುವಿಗೆ ಅಲೆ ಕಂಡು ಬರುತ್ತಿದೆ.

ಹೌದು ಕ್ಷೇತ್ರದಲ್ಲಿ ಈವರೆಗೆ ವಯಕ್ತಿಕವಾಗಿ ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಇಟ್ಟು ಹಾಗೇ ಹೊಸ ಹೊಸ ಕನಸು ಯೋಜನೆಗಳನ್ನು ಹೇಳುತ್ತಾ ಮತಯಾಚನೆ ಮಾಡುತ್ತಿದ್ದಾರೆ.ವಾರ್ಡ್ ನ ಹಲವೆಡೆ ಇಂದು ಕೂಡಾ ಬಿಡುವಿಲ್ಲದೆ ಪ್ರಚಾರ ದೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಇನ್ನೂ ಪ್ರಮುಖವಾಗಿ ಕಳೆದ ಮೂರು ನಾಲ್ಕು ದಿನಗಳಿಂದಲೂ ವಾರ್ಡ್ ನಲ್ಲಿ ಪ್ರಚಾರಕ್ಕೆ ಹೋದ ಸಮಯದಲ್ಲಿ ಸಾರ್ವಜನಿಕರಿಂದ ಸಾಕಷ್ಟು ಪ್ರಮಾಣದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ.ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಚಾರ ಜೋರಾಗಿದ್ದು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ ರಾಜು ಅಂಬೊರೆ ಅವರು.

ಬೆಳ್ಳಂ ಬೆಳಿಗ್ಗೆ ಪಕ್ಷದ ಕಾರ್ಯಕರ್ತರು ಮುಖಂಡರು ಹಾಗೇ ಮಹಿಳಾ ಮುಖಂಡ ರೊಂದಿಗೆ ಮನೆ ಮನೆಗೆ ತೆರಳಿ ಭರ್ಜರಿಯಾಗಿ ಮತಯಾಚನೆ ಮಾಡಿದರು. ವಾರ್ಡ್ ನ ಹಲವು ಬಡಾವಣೆಗಳಲ್ಲಿ ಬಿಡುವಿಲ್ಲದೇ ಮನೆ ಮನೆಗೆ ತೆರಳಿ ಹಲವು ಬಡಾವಣೆಗಳಲ್ಲಿನ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಿದರು ಈಗಾಗಲೇ ಈ ಹಿಂದೆ ವಾರ್ಡ್ ನಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಹೇಳುತ್ತಿದ್ದಾರೆ.ಜೊತೆಗೆ ಇದರೊಂ ದಿಗೆ ಮತಯಾಚನೆ ಮಾಡುತ್ತಿದ್ದಾರೆ
