ನವದೆಹಲಿ –
ಮಲ್ಲಿಕಾರ್ಜುನ ಖರ್ಗೆಗೆ ಒಳಿದು ಬಂತು ಮಹತ್ವದ ಹುದ್ದೆ – ಬಹುಮತದಿಂದ INDIA ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಕೂಟದ ಟೀಮ್ ಹೌದು
ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು INDIA ಮೈತ್ರಿಕೂಟದ ಅಧ್ಯಕ್ಷರನ್ನಾಗಿ ನೇಮಕ ಮಾಡ ಲಾಗಿದೆ.ಹೌದು INDIA ಮೈತ್ರಿಕೂಟದ ಮುಖ್ಯ ಸ್ಥರಾಗಿ ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿ ಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಿ ಮಹ ತ್ವದ ಜವಾಬ್ದಾರಿಯನ್ನು ನೀಡಲಾಗಿದೆ.28 ವಿರೋಧ ಪಕ್ಷಗಳ ಭಾರತ ಮೈತ್ರಿಕೂಟವು ವರ್ಚುವಲ್ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.
ಇತ್ತೀಚೆಗಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿ ವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ಸೂಚಿಸಿದ್ದವು.
ಸಭೆಯಲ್ಲಿ ಬಣವನ್ನು ಮುನ್ನಡೆಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೆಸರನ್ನು ಸಹ ಪ್ರಸ್ತಾಪಿಸಲಾಯಿತು ಆದರೆ ಅವರು ನಿರಾಕರಿಸಿದ್ದು ಇದೇಲ್ಲದರ ಬೆಳವಣಿ ಗೆಯ ನಡುವೆ ಸಧ್ಯ ಮಲ್ಲಿಕಾರ್ಜುನ ಖರ್ಗೆ ಯವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..