This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಕರ್ನಾಟಕ ಒನ್ ಕೇಂದ್ರಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಿ

WhatsApp Group Join Now
Telegram Group Join Now

ಹುಬ್ಬಳ್ಳಿ ,-

ಸಾರ್ವಜನಿಕರಿಗೆ ಅನುಕೂಲವಾಗುವಂತೆ 26 ಇಲಾಖೆಗಳ 64 ಸೇವೆಗಳನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಈ ಕೇಂದ್ರಗಳಲ್ಲಿ ಕಂಪ್ಯೂಟರ್ ಹಾಗೂ ಇತರೆ ತಾಂತ್ರಿಕ ದೋಷಗಳು ಬರದಂತೆ ಉತ್ತಮ ರೀತಿಯಲ್ಲಿ ಅಧಿಕಾರಿಗಳು ಕೇಂದ್ರದ ನಿರ್ವಹಣೆ ಮಾಡಬೇಕು ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬಂಕಾಪುರದಿಂದ ಚನ್ನಮ್ಮ ವೃತ್ತದವರೆಗೆ ನಾಲ್ಕುದ ಪಥ ರಸ್ತೆ ನಿರ್ಮಿಸಲಾಗಿದೆ. ನೂತನ ಫೈ ಓವರ್ ನಿರ್ಮಾಣದ ಸಂದರ್ಭದಲ್ಲಿ ಬಂಕಾಪುರದ ವರೆಗೂ ಮೇಲುಸೇತುವೆಯನ್ನು ವಿಸ್ತರಣೆ ಮಾಡಲಾಗುವುದು. ಈ ಭಾಗದ ಶಾಲೆಗಗಳಿಗೆ ಡೆಸ್ಕ್ ಹಾಗೂ ಸ್ಮಾರ್ಟ್ ಬೋರ್ಡ್‍ಗಳನ್ನು ಸಂಸದರ ಅನುದಾನದಲ್ಲಿ ನೀಡಲಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಅಬ್ಬಯ್ಯ ಪ್ರಸಾದ್ ಸುಮಾರು 2 ಕೋಟಿ ಅನುದಾನದಲ್ಲಿ ಮೂರು ಹಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಕರ್ನಾಟಕ ಒನ್, ಗ್ರಾಮಲೆಕ್ಕಾಧಿಕಾರಿ ಕಾರ್ಯಾಲಯ ಹಾಗೂ ರೈತಭವನಗಳು ಕಾರ್ಯನಿರ್ವಹಿಸಲಿವೆ. ಸರ್ಕಾರದ ಆಡಳಿತ ವ್ಯವಸ್ಥೆ ವಿಕೇಂದ್ರಿಕರಣಗೊಳ್ಳಬೇಕು. ಈ ನಿಟ್ಟಿನಲ್ಲಿ ಹಳೇ ಹುಬ್ಬಳ್ಳಿ, ಶ್ರೀರಾಮಪುರ ಓಣಿ ಹಾಗೂ ವೀರಾಪುರ ಓಣಿಗಳಲ್ಲಿ ಜನರಿಗೆ ಅನುಕೂಲವಾಗುವಂತೆ ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಸರ್ಕಾರಿ ಜಾಗ ಮತ್ತು ಕಟ್ಟಡಗಳು ಖಾಸಗಿ ವ್ಯಕ್ತಿಗಳ ಕೈಗೆ ಸೇರಬಾರದು ಹಾಗೂ ವೈಯಕ್ತಿಕ ಆಸಕ್ತಿಗೆ ಬಳಕೆ ಆಗಬಾರದು. 2016-17ನೇ ಸಾಲಿನಲ್ಲಿ ಕ್ಷೇತ್ರ ಅಭಿವೃದ್ಧಿಗೆ ಸಿ.ಎಂ.ನಿಧಿಯಡಿ 100 ಕೋಟಿ ಅನುದಾನಲ್ಲಿ ನೀಡಲಾಗಿದೆ. ಇದನ್ನು ಕ್ಷೇತ್ರ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಪಾಲಿಕೆ ಅನುದಾದಲ್ಲಿ ಲ್ಯಾಪ್‍ಟಾಪ್ ವಿತರಿಸಲಾಯಿತು.

ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮಿ ಸಾನಿಧ್ಯ ವಹಿಸಿದ್ದರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್, ರೈತ ಮುಖಂಡ ಪರ್ವತಪ್ಪ ಬೆಳಗಣ್ಣವರ ಸೇರಿದಂತೆ ಮತ್ತಿತರು ಇದ್ದರು.  


Google News

 

 

WhatsApp Group Join Now
Telegram Group Join Now
Suddi Sante Desk