ಬೆಂಗಳೂರು –
ರಾಜ್ಯದಲ್ಲಿ ಸಾರಿಗೆ ನೌಕರರ ಪ್ರತಿಭಟನೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ.ಇತ್ತ ಹೋರಾಟಕ್ಕೆ ಸರ್ಕಾರ ಕೂಡಾ ಸ್ಪಂದಿಸುತ್ತಿಲ್ಲ ಇನ್ನೂ ಬೇಸತ್ತ ಸಾರಿಗೆ ನೌಕ ರರು ಕೂಡಾ ಒಬ್ಬೊಬ್ಬರು ಆತ್ಮಹತ್ಯೆ ಮಾಡಿಕೊಳ್ಳು ತ್ತಿದ್ದಾರೆ.ಹೌದು ಈಗಾಗಲೇ ರಾಜ್ಯದ ಹಲವೆಡೆ ಸಾರಿ ಗೆ ನೌಕರರು ಸಾಲು ಸಾಲಾಗಿ ಆತ್ಮಹತ್ಯೆ ಮಾಡಿಕೊ ಳ್ಳುತ್ತಿದ್ದು ಇದಕ್ಕೆ ಬೆಂಗಳೂರಿನಲ್ಲಿ ಮತ್ತೊಬ್ಬ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೌದು ಯುಗಾದಿ ಹಬ್ಬಕ್ಕೆ ಮಕ್ಕಳಿಗೆ ಹೊಸ ಬಟ್ಟೆ ಕೊಡಿಸಲು ಆಗಲಿಲ್ಲ ಎಂಬ ಕಾರಣಕ್ಕಾಗಿ ನೊಂದ ಬಿಎಂಟಿಸಿ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ

ಹೌದು ಉತ್ತರಹಳ್ಳಿಯ ಡಿಪೋ 33 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗದಗ ಜಿಲ್ಲೆಯ ನಿಡಗುಂದಿ ನಿವಾಸಿ ಟಿಪ್ಪು ಸುಲ್ತಾನ್ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿ ಟಿಪ್ಪು ಕುಟುಂಬಕ್ಕೆ ಮಾರ್ಚ್ ತಿಂಗಳ ವೇತನ ಬಿಡುಗಡೆ ಆಗದೇ ಇದ್ದಿದ್ದರಿಂದ ಮಕ್ಕಳಿಗೆ ಬಟ್ಟೆ ಕೊಡಿಸಲು ಆಗಿರಲಿಲ್ಲ. ಇದರಿಂದ ಮನೆಯಲ್ಲಿ ಪದೇಪದೆ ಜಗಳ ಆಗುತ್ತಿತ್ತು ಹೀಗಾಗಿ ನೊಂದುಕೊಂಡ ಟಿಪ್ಪುಸುಲ್ತಾನ್ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ