ಮಂಗಳೂರು –
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಮಿಥುನ್ ರೈ ಕಣದಿಂದ ಹಿಂದೆ ಸರಿದಿದ್ದಾರೆ.

ಅಭ್ಯರ್ಥಿಗಳ ಪೈಕಿ ಪ್ರಭಾವಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಈವರೆಗೆ ಎಲ್ಲಾ ಸಿದ್ದತೆ ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದ ಮಿಥುನ್ ರೈ ಸ್ಪರ್ಧೆ ಮಾಡಿದ್ದರು.ಏಕಾಏಕಿಯಾಗಿ ಕಣದಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.ಇನ್ನೂ ಇದಕ್ಕೆ ಕೊಟ್ಟ ಉತ್ತರ ಕೊಟ್ಟ ಕಾರಣ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ತಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ನಾಗಿದ್ದೇನೆ ಮತ್ತು ಅವರ ಸೂಚನೆಯಂತೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಅವರು ತಮ್ಮ ನಿವೃತ್ತಿಯ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಜನವರಿ 10, 11 ಹಾಗೂ 13 ರಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಯುತ್ತಿದೆ. ಈ ಪ್ರಭಾವಿ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕೂಡ ಸ್ಪರ್ಧೆ ನಡೆಸಿದ್ದರು.

ಚುನಾವಣೆ ಘೋಷಣೆ ಆದಾಗಿನಿಂದ ಎಲ್ಲಾ ರೀತಿಯ ಸಿದ್ದತೆ ಪ್ರಚಾರ ಹೀಗೆ ಎಲ್ಲವನ್ನೂ ಮಾಡಿಕೊಂಡು ಗೆಲ್ಲುವ ಅಭ್ಯರ್ಥಿ ಯಾಗಿದ್ದರು ಇವರು.

ಸ್ಪರ್ಧೆ ಮಾಡಿ ಏಕಾಏಕಿಯಾಗಿ ಅಖಾಡದಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ.ಏನೇ ಆಗಲಿ ದಿಢೀರ್ ಹೀಗೆ ಮಿಥುನ್ ರೈ ಕಣದಿಂದ ಹಿಂದೆ ಸರಿದಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.