ಹರಿಹರ –
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಲಾನ್ಯಾಸ ಮಾಡಿದರು.ಜಿಲ್ಲೆಯ ಹರಿಹರದ ತುಂಗಭದ್ರಾ ನದಿಯ ತಟದಲ್ಲಿ ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗಳು,ಸಚಿವರಾದ ಬೈರತಿ ಬಸವರಾಜ, ಮುರುಗೇಶ್ ನಿರಾಣಿ,ಸಂಸದ ಜಿ.ಎಂ.ಸಿದ್ದೇಶ್ವರ ಮೊದಲಾದವರು ಈ ಒಂದು ಸಮಯದಲ್ಲಿ ಉಪಸ್ಥಿತ ರಿದ್ದರು.