ಕಲಬುರಗಿ –
ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ನೇತೃತ್ವದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮನವಿ ಸಲ್ಲಿಸಿದರು.

ಸಿಂದಗಿ ಯಲ್ಲಿ ಪದಾಧಿಕಾರಿಗಳು ಭೇಟಿಯಾದರು. 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅವಶ್ಯಕ ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಅವೈಜ್ಞಾನಿಕ ಅಂಶಗಳನ್ನು ಸರಿಪಡಿಸಿ ಮರು ಆದೇಶ ಹೊರಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸ ಬೇಕು ಎಂದು ಅವರು ತಿಳಿಸಿದರು.ಮನವಿಗೆ ಸ್ಪಂದಿಸಿದ ಸಚಿವರು ಸರ್ಕಾರವು ಶಿಕ್ಷಕರ ಪರ ಇದೆ.ಅವರಿಗೆ ಅನ್ಯಾ ಯ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. ಸಂಸದ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾ ರಿಗಳು ಇದ್ದರು.