ಹುಬ್ಬಳ್ಳಿ –
ಧಾರವಾಡ ಜಿಲ್ಲೆಯಲ್ಲಿನ ಕೋವಿಡ್ ಕುರಿತಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಸಭೆ ಮಾಡಿದರು.ಕೋವಿಡ್ -19ಕ್ಕೆ ಸಂಬಂಧಿಸಿದಂತೆ ಕೊರೋನಾ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವು ವಿಷಯಗಳ ಕುರಿತು ಚರ್ಚಿಸಿದರು.

ಜಿಲ್ಲೆಯ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಆಕ್ಸಿಜನ್, ಬೆಡ್, ಅಗತ್ಯ ವೈದ್ಯಕೀಯ ಸೌಕರ್ಯಗಳು ಹಾಗೂ ಜಿಲ್ಲೆಯಲ್ಲಿ ಜನರ ಸುರಕ್ಷತೆಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚ ನೆ ನಡೆಸಿ ಸಲಹೆ ಸೂಚನೆಗಳನ್ನು ನೀಡಲಾಯಿತು. ಹಾಗೇ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 30 ಟನ್ ಆಕ್ಸಿಜನ್ ಟ್ಯಾಂಕರ್ ಕಳುಹಿಸಿದ್ದು ಈಗಾಗ ಲೇ 150ಕ್ಕೂ ಹೆಚ್ಚು ಆಕ್ಸಿಜನ್ ಘಟಕ ಸ್ಥಾಪಿಸಲು ಅನುಮತಿ ನೀಡಿದ್ದು ಮತ್ತು 1500 ಕಾನ್ಸನ್ಟ್ರೇಟರ್ಸ ಸಾಂದ್ರಕ ವ್ಯವಸ್ಥೆ ಮಾಡಿದ್ದರ ಕುರಿತು ಮಾಹಿತಿ ನೀಡಲಾಯಿತು.

ಹಾಗೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ, ಮುಖ್ಯಮಂತ್ರಿ ಬಿ ಎಸ್ ಯಡಿ ಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಎಲ್ಲ ರೀತಿಯಲ್ಲೂ ಜನರ ಆರೋಗ್ಯ ಸಮಸ್ಯೆಗೆ ಸ್ಪಂದಿಸುತ್ತಿದ್ದು ಜನರು ಆತಂಕಕ್ಕೊಳಗಾಗದೆ ಭಯಪಡದಿರಲು ಮತ್ತು ಮುಂಬರುವ 14 ದಿನಗಳ ಕಾಲ ಹೊರಬರದೇ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗೆ ಸ್ಪಂದಿಸಿ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಿ ಎಂದು ತಮ್ಮಲ್ಲಿ ವಿನಂತಿಸಿದರು.

ಇನ್ನೂ ಈ ಒಂದು ಸಭೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಶಾಸಕರಾದ ಅರವಿಂದ್ ಬೆಲ್ಲದ್,ಪ್ರಸಾದ್ ಅಬ್ಬಯ್ಯ,ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಪೊಲೀ ಸ್ ಆಯುಕ್ತರಾದ ಲಾಬುರಾಮ್ ಹಾಗೇ ವೈಧ್ಯಾಧಿ ಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.






















