ರಾಯಚೂರು –
ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ವೇತನ ಆಯೋಗ ರಚಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ರಾಯಚೂರಿನಲ್ಲಿ ಪ್ರತಿಭಟನೆ ಮಾಡಿ ಮನವಿ ನೀಡಿ ಒತ್ತಾಯವನ್ನು ಮಾಡಿದರು.ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು ಸರ್ಕಾರಿ ನೌಕರರು ವೇತನ ಪಡೆಯುವುದಕ್ಕಿಂತ ದುಪ್ಪಟ್ಟು ಕೆಲಸ ಮಾಡುತ್ತಿದ್ದಾರೆ.ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ವೇತನ ಕಡಿಮೆಯಾಗಿದೆ.ಸರ್ಕಾರಿ ನೌಕರರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.ಇನ್ನೂ ಸಾಕಷ್ಟು ಸರ್ಕಾರಿ ಹುದ್ದೆಗಳು ಖಾಲಿಯಾಗಿದ್ದು ಕೂಡಲೇ ಭರ್ತಿ ಮಾಡಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು ಈ ಒಂದು ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ತಾಯರಾಜ್ ಮರ್ಚೆಟ್ಹಾಳ,ರಾಜ್ಯ ಜಂಟಿ ಕಾರ್ಯದರ್ಶಿ ನಾರಾಯಣ,ಸದಸ್ಯರಾದ ಶಹಾಬುದ್ದೀನ್,ಸುಧಾಕರ, ಮಧುಕಾಂತ,ಮೈನುದ್ದೀನ್ ಸೇರಿ ಇತರರಿದ್ದರು.