ಬೆಂಗಳೂರು –
ಗ್ರಾಮೀಣ ಪ್ರದೇಶದ ಶಾಲಾ ವಿದ್ಯಾರ್ಥಿನಿಯರಿಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.ಹೌದು ವಸತಿಯುತ ಶಾಲೆಯ ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸ್ವರಕ್ಷಣೆಗಾಗಿ ಕರಾಟೆ ಕಲಿಸಲು 1000 ಕರಾಟೆ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದರು. ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಸಾಲ್ಮರದಲ್ಲಿ ದೇವರಾಜು ಅರಸು ಭವನ ಉದ್ಘಾಟಿಸಿ ಮಾತನಾಡಿದ ಅವರು ಶೀಘ್ರದಲ್ಲೇ ಈ ಒಂದು ಯೋಜನೆ ಯನ್ನು ಆರಂಭ ಮಾಡೊದಾಗಿ ತಿಳಿಸಿದರು.ಹೆಣ್ಣು ಮಕ್ಕಳು ಕರಾಟೆ ಕಲಿತರೆ ಸ್ವರಕ್ಷಣೆಗೆ ಪ್ರಯೋಜನವಾಗ ಲಿದೆ ಈ ಹಿನ್ನೆಲೆಯಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ ಸಚಿವರು ಈ ಬಾರಿ ದೀನದಯಾಳ್ ಉಪಾ ಧ್ಯಾಯ ಹೆಸರಲ್ಲಿ ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ 5 ವಸತಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.